ದೇಶ

'ಭಾರತ್ ಜೋಡೋ ಯಾತ್ರೆ': ರಾಹುಲ್ ಗಾಂಧಿಯನ್ನು ಶ್ಲಾಘಿಸಿದ ಮೆಹಬೂಬಾ ಮುಫ್ತಿ

Lingaraj Badiger

ಜಮ್ಮು: ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತ್ ಜೋಡೋ ಯಾತ್ರೆ'ಯನ್ನು ಶ್ಲಾಘಿಸಿದ್ದಾರೆ ಮತ್ತು ಬಿಜೆಪಿಯ ದಾಳಿಯಿಂದ ದೇಶ ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸಲು ಹೋರಾಡುತ್ತಿರುವ ಕಾಂಗ್ರೆಸ್ ನಾಯಕನನ್ನು ಜನ ಬೆಂಬಲಿಸಬೇಕಾಗಿದೆ ಎಂದು ಭಾನುವಾರ ಹೇಳಿದ್ದಾರೆ.

ವಿವಿಧ ಕ್ರೀಡಾ ಸಂಸ್ಥೆಗಳಿಗೆ ಬಿಜೆಪಿ ನಾಯಕರ ಸಂಬಂಧಿಕರನ್ನು ಆಯ್ಕೆ ಮಾಡುವ ಮಾನದಂಡವನ್ನು ಪ್ರಶ್ನಿಸಿದ ಮುಫ್ತಿ, "ಜಯ್ ಶಾ (ಗೃಹ ಸಚಿವ ಅಮಿತ್ ಶಾ ಅವರ ಮಗ) ಅವರಿಗೆ ಬ್ಯಾಟ್ ಹಿಡಿಯುವುದು ಹೇಗೆಂದು ಗೊತ್ತಿದಿದೆಯೇ?" ಎಂದು ಪ್ರಶ್ನಿಸಿದರು. ಅಲ್ಲದೆ ರಾಹುಲ್ ಗಾಂಧಿ ಅವರು ದೇಶಕ್ಕಾಗಿ ತ್ಯಾಗ ಮಾಡಿದ ಇತಿಹಾಸ ಹೊಂದಿರುವ ಗಾಂಧಿ ಕುಟುಂಬದವರಾಗಿರುವುದರಿಂದ ಅವರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

"ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ, ಜೈಲಿಗೆ ಹೋಗಿ ಬಲಿಷ್ಠ ಭಾರತಕ್ಕೆ ಅಡಿಪಾಯ ಹಾಕಿದ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಮಾನಹಾನಿ ಮಾಡುತ್ತಿದ್ದಾರೆ. ಅವರ ಮೊಮ್ಮಗ ರಾಹುಲ್ ಗಾಂಧಿಯನ್ನು ಅವರು 'ಶಹಜಾದ' (ರಾಜಕುಮಾರ) ಎಂದು ಬಣ್ಣಿಸುತ್ತಾರೆ. ಆದರೆ ರಾಹುಲ್ ಗಾಂಧಿ ರಸ್ತೆಯಲ್ಲಿ(ಭಾರತ್ ಜೋಡೋ ಯಾತ್ರೆಗಾಗಿ) ಪ್ರತಿಕೂಲ ಹವಾಮಾನವನ್ನು ಎದುರಿಸಿ, ದೇಶ ಮತ್ತು ಅದರ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಒಂದುಗೂಡಿಸಲು ಮತ್ತು ರಕ್ಷಿಸಲು ಹೋರಾಡುತ್ತಿದ್ದಾರೆ" ಮೆಹಬೂಬಾ ಮುಫ್ತಿ ಹೇಳಿದರು.

ಬಿಜೆಪಿ ಜಾತ್ಯತೀತತೆ ಮತ್ತು ಪ್ರಜಾಪ್ರಭುತ್ವಕ್ಕೆ ಹೆದರುತ್ತಿದೆ ಎಂದ ಮಾಜಿ ಸಿಎಂ, ಅದು ತನ್ನ ಪಟ್ಟಭದ್ರ ರಾಜಕೀಯ ಹಿತಾಸಕ್ತಿಗಳಿಗಾಗಿ ಧರ್ಮ ಮತ್ತು ಪ್ರದೇಶಗಳ ಹೆಸರಿನಲ್ಲಿ ದೇಶವನ್ನು ವಿಭಜಿಸುತ್ತಿದೆ ಎಂದು ಆರೋಪಿಸಿದರು.

SCROLL FOR NEXT