ಕೋವಿಡ್-19 ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 2,424 ಹೊಸ ಸೋಂಕು ಪ್ರಕರಣಗಳು ಪತ್ತೆ, 15 ಸಾವು

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,424 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 15 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,424 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 15 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸೋಮವಾರ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ 2,424 ಹೊಸ ಕೊರೋನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟು COVID-19 ಪ್ರಕರಣಗಳ ಸಂಖ್ಯೆಯನ್ನು 4,46,14,437 ಕ್ಕೆ ತಲುಪಿದೆ. ಅಂತೆಯೇ ಇದೇ ಅವಧಿಯಲ್ಲಿ ದೇಶದಲ್ಲಿ 15 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಈ ಪೈಕಿ ಕೇರಳವೊಂದರಲ್ಲೇ 12 ಸಾವು ವರದಿಯಾಗಿದೆ. ಒಟ್ಟಾರೆ ಸಾವಿನ ಸಂಖ್ಯೆ 5,28,814 ಕ್ಕೆ ಏರಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ 514 ಇಳಿಕೆಯಾಗಿದ್ದು, ಪ್ರಸ್ತುತ ದೇಶದಲ್ಲಿ 28,079 ಸಕ್ರಿಯ ಪ್ರಕರಣಗಳಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 0.06 ಪ್ರತಿಶತವನ್ನು ಒಳಗೊಂಡಿದ್ದು, ಆದರೆ ರಾಷ್ಟ್ರೀಯ COVID-19 ಚೇತರಿಕೆ ದರವು 98.75 ಪ್ರತಿಶತಕ್ಕೆ ಏರಿಕೆಯಾಗಿದೆ. ಅಂತೆಯೇ ದೈನಂದಿನ ಸಕಾರಾತ್ಮಕತೆಯ ದರವು 2.65 ಪ್ರತಿಶತದಷ್ಟು ದಾಖಲಾಗಿದ್ದರೆ, ವಾರದ ಸಕಾರಾತ್ಮಕ ದರವು ಶೇ.1.27 ರಷ್ಟಿದೆ. ಅಂತೆಯೇ ದೇಶದಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,40,57,544 ಕ್ಕೆ ಏರಿದೆ.

ಸಚಿವಾಲಯದ ಪ್ರಕಾರ, ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 218.99 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!