ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಡಿವೈ ಚಂದ್ರಚೂಡ್​ ಹೆಸರು ಶಿಫಾರಸು ಮಾಡಿದ CJI ಯುಯು ಲಲಿತ್

ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರೊಂದಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್
Srinivasa Murthy VN
Updated On : 11 Oct 2022, 7:05 pm

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದು, ಉನ್ನತ ನ್ಯಾಯಾಲಯದ ನ್ಯಾಯಾಧೀಶರು ನಡೆಸಿದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ಈ ಶಿಫಾರಸು ಮಾಡಲಾಗಿದೆ.

ಇದನ್ನೂ ಓದಿ: ಶಾಸಕ, ಸಂಸದರ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ವಿವರ ನೀಡಿ: ಹೈಕೋರ್ಟ್ ಗಳಿಗೆ ಸುಪ್ರೀಂ ಆದೇಶ

Advertisement

Advertisement

ಸಿಜೆಐ ಉದಯ್ ಉಮೇಶ್ ಲಲಿತ್ ಅವರು ಇಂದು ಬೆಳಗ್ಗೆ 10.15ಕ್ಕೆ ತಮ್ಮ ಉತ್ತರಾಧಿಕಾರಿ ಹೆಸರಿನಲ್ಲಿ ಸರ್ಕಾರಕ್ಕೆ ಪತ್ರ ಕಳುಹಿಸಿದ್ದಾರೆ. ಇದರೊಂದಿಗೆ ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 9 ರಂದು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಮತ್ತು ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.

ಈ ಹಿಂದೆ ಕಾನೂನು ಮತ್ತು ನ್ಯಾಯ ಸಚಿವಾಲಯವು ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರಿಗೆ ಪತ್ರ ಬರೆದು ಹೊಸ ಸಿಜೆಐ ಹೆಸರನ್ನು ಶಿಫಾರಸು ಮಾಡಿ ನೇಮಕಾತಿಗೆ ಸಂಬಂಧಿಸಿದ ಜ್ಞಾಪಕ ಪತ್ರ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಮನವಿ ಮಾಡಿತ್ತು.

ಇದನ್ನೂ ಓದಿ: ದೇಶದಲ್ಲಿ ಕಾನೂನು ನೆರವು ಕಾರ್ಯ ನಿರ್ಲಕ್ಷ್ಯ: ಸಿಜೆಐ ಯುಯು ಲಲಿತ್ 

ನ್ಯಾಯಮೂರ್ತಿ ಚಂದ್ರಚೂಡ್ ಅವರು ಮುಂದಿನ ಸಿಜೆಐ ಆಗಲಿದ್ದು, ಅವರ ಅಧಿಕಾರಾವಧಿ ಎರಡು ವರ್ಷಗಳವರೆಗೆ ಇರುತ್ತದೆ. ಅವರು 10 ನವೆಂಬರ್ 2024 ರಂದು ನಿವೃತ್ತರಾಗಲಿದ್ದಾರೆ. ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು 65 ನೇ ವಯಸ್ಸಿನಲ್ಲಿ ಮತ್ತು ಹೈಕೋರ್ಟ್‌ನ ನ್ಯಾಯಾಧೀಶರು 62 ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments