ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಪಾನೀಯ ನೀಡಿ ಮಹಿಳೆ ಮೇಲೆ ಮೂವರಿಂದ ಗ್ಯಾಂಗ್ ರೇಪ್!

ಮಹಿಳೆಯ ಮೇಲೆ ಮೂವರು ಅತ್ಯಾಚಾರವೆಸಗಿರೋ ಘಟನೆ ವಾಯುವ್ಯ ದೆಹಲಿಯ ಆದರ್ಶ್ ನಗರದಲ್ಲಿ ನಡೆದಿದೆ. ಹೋಟೆಲ್ ಕೊಠಡಿಯೊಳಗೆ 32 ವರ್ಷದ ಮಹಿಳೆಯ ಮೇಲೆ ಮೂವರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ನವದೆಹಲಿ: ಮಹಿಳೆಯ ಮೇಲೆ ಮೂವರು ಅತ್ಯಾಚಾರವೆಸಗಿರೋ ಘಟನೆ ವಾಯುವ್ಯ ದೆಹಲಿಯ ಆದರ್ಶ್ ನಗರದಲ್ಲಿ ನಡೆದಿದೆ. ಹೋಟೆಲ್ ಕೊಠಡಿಯೊಳಗೆ 32 ವರ್ಷದ ಮಹಿಳೆಯ ಮೇಲೆ ಮೂವರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ಆರೋಪಿಗಳಾದ ಅಜಯ್, ತಾರಾ ಚಂದ್ ಮತ್ತು ನರೇಶ್ ಮೂವರು ಸ್ಥಳೀಯರಾಗಿದ್ದು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಭಾನುವಾರ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಪಿಸಿಆರ್ ಕರೆ ಸ್ವೀಕರಿಸಲಾಯಿತು ಎಂದು ಉಪ ಪೊಲೀಸ್ ಆಯುಕ್ತ (ವಾಯುವ್ಯ) ಉಷಾ ರಂಗನಾನಿ ಹೇಳಿದ್ದಾರೆ.

ಸಂತ್ರಸ್ತೆ ಹೇಳಿಕೆಯಲ್ಲಿ ತನ್ನ ಪರಿಚಯಸ್ಥ ಅಜಯ್ ಭಾನುವಾರ ಹೋಟೆಲ್ ಕೋಣೆಗೆ ಆಹ್ವಾನಿಸಿದ್ದರು ಎಂದು ಮಹಿಳೆ ಹೇಳಿದ್ದಾರೆ. ಆದರೆ  ಹೋಟೆಲ್ ನಲ್ಲಿ ಅವರ ಇಬ್ಬರು ಸ್ನೇಹಿತರು ಸಹ ಇದ್ದರು. ಅವರು ಮಹಿಳೆಗೆ ಪಾನೀಯ ನೀಡಿದರು. ಅದನ್ನು ಕುಡಿದ ನಂತರ ಅವರು ಪ್ರಜ್ಞೆ ಕಳೆದುಕೊಂಡರು. ಇದರ ಬೆನ್ನಲ್ಲೇ ಮೂವರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆಕೆಯ ದೂರಿನ ಆಧಾರದ ಮೇಲೆ ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ಹೇಳಿಕೆ ಮತ್ತು ಮೆಡಿಕೋ-ಲೀಗಲ್ ಪ್ರಕರಣ (ಎಂಎಲ್‌ಸಿ) ವರದಿಯನ್ನು ವಿವಿಧ ಸೆಕ್ಷನ್ ಗಳ ಅಡಿ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ . ಅಪರಾಧ ತಂಡವು ಹೋಟೆಲ್‌ನಿಂದ ಮಾದರಿಗಳನ್ನು ಸಂಗ್ರಹಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT