'ಜೂಮ್' ನಾಯಿ 
ದೇಶ

ಕಾಶ್ಮೀರ: ಉಗ್ರ ದಾಳಿಯಲ್ಲಿ ಗಾಯಗೊಂಡಿದ್ದ ಶ್ವಾನ ಸೈನಿಕ 'ಜೂಮ್' ಸ್ಥಿತಿ ಗಂಭೀರ

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಭಾರತೀಯ ಸೇನೆಯ ಆಕ್ರಮಣಕಾರಿ ನಾಯಿ "ಜೂಮ್" ಶ್ರೀನಗರದ ಮಿಲಿಟರಿ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಭಾರತೀಯ ಸೇನೆಯ ಆಕ್ರಮಣಕಾರಿ ನಾಯಿ "ಜೂಮ್" ಶ್ರೀನಗರದ ಮಿಲಿಟರಿ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದೆ. 

ದಾಳಿಯಲ್ಲಿ ಜೂಮ್ ದೇಹ ಹೊಕ್ಕಿದ್ದ ನಾಲ್ಕು ಗುಂಡುಗಳನ್ನು ಹೊರ ತೆಗೆಯಲಾಗಿದೆ. ಅದರ ಮುಖ ಮತ್ತು ಹಿಂಭಾಗದ ಬಲಗಾಲಿನ ಮೇಲೆ ಗುಂಡೇಟಿನ ಗಾಯವಾಗಿದ್ದ ಕಾರಣ ಆಪರೇಷನ್ ಮಾಡಲಾಗಿದೆ.

ದಾಳಿಯಲ್ಲಿ ನಾಯಿ ಗಂಭೀರವಾಗಿ ಗಾಯಗೊಳ್ಳುವ ಮುನ್ನ ನಡೆದ ಜಂಟಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಭಾನುವಾರ ತಡರಾತ್ರಿ ದಕ್ಷಿಣ ಕಾಶ್ಮೀರ ಜಿಲ್ಲೆಯ ತಂಗ್ಪಾವಾ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಬಂದ ನಂತರ ಎನ್​ಕೌಂಟರ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು.

ಉಗ್ರರು ಅಡಗಿರುವ ಮನೆಯಿಂದ ಆ ಉಗ್ರರನ್ನು ಹೊರಗೆ ಕರೆತರುವ ಕೆಲಸವನ್ನು ಜೂಮ್ ಎಂಬ ಭಾರತೀಯ ಸೇನೆಯ ನಾಯಿಗೆ ವಹಿಸಲಾಗಿತ್ತು. ಆ ನಾಯಿ ಮನೆಯೊಳಗೆ ಹೋಗಿ ಉಗ್ರರ ಮೇಲೆ ದಾಳಿ ಮಾಡಿತ್ತು. ಈ ಕಾರ್ಯಾಚರಣೆಯ ಸಮಯದಲ್ಲಿ ಆ ನಾಯಿಯ ಮೇಲೆ ಎರಡು ಬಾರಿ ಗುಂಡಿನ ದಾಳಿ ನಡೆಸಿದ್ದರಿಂದ ನಾಯಿಗೆ ಗಂಭೀರವಾದ ಗಾಯಗಳಾಗಿವೆ.

ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದರೂ ಹೆದರದ ಈ ನಾಯಿ ತನ್ನ ಕಾರ್ಯವನ್ನು ಮುಂದುವರೆಸಿತು. ಅಲ್ಲದೆ ಇಬ್ಬರು ಭಯೋತ್ಪಾದಕರ ಹತ್ಯೆಗೂ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!