ಸಂಗ್ರಹ ಚಿತ್ರ 
ದೇಶ

ಅಪ್ರಾಪ್ತನ ಜೊತೆ ಮದುವೆ: 20 ವರ್ಷದ ಗರ್ಭೀಣಿ ವಿದ್ಯಾರ್ಥಿನಿ ಬಂಧನ!

ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ತನ್ನ ಅಪ್ರಾಪ್ತ ಸಹಪಾಠಿಯನ್ನು ಮದುವೆಯಾದ ಆರೋಪದ ಮೇಲೆ ಗರ್ಭಿಣಿಯಾಗಿರುವ 20 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೆನ್ನೈ: ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ತನ್ನ ಅಪ್ರಾಪ್ತ ಸಹಪಾಠಿಯನ್ನು ಮದುವೆಯಾದ ಆರೋಪದ ಮೇಲೆ ಗರ್ಭಿಣಿಯಾಗಿರುವ 20 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್‌ನಲ್ಲಿ ಕಾಣೆಯಾದಾಗ ಅಪ್ರಾಪ್ತನಾಗಿದ್ದ ಹದಿಹರೆಯದವ, ಹಿರಿಯ ವಿದ್ಯಾರ್ಥಿನಿಯೊಂದಿಗೆ ವಾಸಿಸುತ್ತಿರುವುದು ಕಂಡುಬಂದಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೋಷಕರು ಅರ್ಜಿ ಸಲ್ಲಿಸಿದ ನಂತರ ಪೊಲೀಸರು ಆತನನ್ನು ಪತ್ತೆಹಚ್ಚಿದ್ದಾರೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ಸಂರಕ್ಷಣಾ ಕಾಯ್ದೆ(ಪೋಕ್ಸೊ) ಅಡಿಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನ್ಯಾಯಾಲಯವು ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ಸೇಲಂ ನಗರದ ಪೊಲೀಸ್ ಕಮಿಷನರ್ ನಜ್ಮುಲ್ ಹೋಡಾ ತಿಳಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ, ರಾಜ್ಯದ ಕಡಲೂರು ಜಿಲ್ಲೆಯಲ್ಲಿ 16 ವರ್ಷದ ಹುಡುಗಿಯನ್ನು ಮದುವೆಯಾಗಿದ್ದಕ್ಕಾಗಿ 17 ವರ್ಷದ ಹುಡುಗನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಬಸ್ ನಿಲ್ದಾಣದಲ್ಲಿ ಬಾಲಕಿಗೆ ಮಂಗಳಸೂತ್ರ ಹಾಕುವ ವಿಡಿಯೋ ವೈರಲ್ ಆದ ನಂತರ ಆತನ ಬಂಧನವಾಗಿದೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಾಲಕನನ್ನು ಅಬ್ಸರ್ವೇಶನ್ ಹೋಮ್‌ಗೆ ಕಳುಹಿಸಿದ್ದಾರೆ. ಬಾಲಕಿಯೊಂದಿಗೆ ಬಾಲಕ ಲೈಂಗಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ಲೋಡ್ ಮಾಡಿದ ಆರೋಪದ ಮೇಲೆ ಎಸ್ಸಿ/ಎಸ್ಟಿ ಕಾಯ್ದೆಯಡಿ ಪೊಲೀಸರು ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT