ಸಾಂದರ್ಭಿಕ ಚಿತ್ರ 
ದೇಶ

ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಲ್ಲಿ 3 ಐಇಡಿಗಳಿದ್ದ ಬ್ಯಾಗ್ ಪತ್ತೆ, ತಪ್ಪಿದ ಭಾರಿ ಅನಾಹುತ

ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಅರಣ್ಯ ಪ್ರದೇಶದಿಂದ ಬ್ಯಾಗ್‌ನಲ್ಲಿ ಮೂರು ಶಕ್ತಿಶಾಲಿ ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಪತ್ತೆ ಮಾಡಿದ್ದು, ಭಾರಿ ದುರಂತವೊಂದನ್ನು ತಪ್ಪಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಅರಣ್ಯ ಪ್ರದೇಶದಿಂದ ಬ್ಯಾಗ್‌ನಲ್ಲಿ ಮೂರು ಶಕ್ತಿಶಾಲಿ ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಪತ್ತೆ ಮಾಡಿದ್ದು, ಭಾರಿ ದುರಂತವೊಂದನ್ನು ತಪ್ಪಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬುಧವಾರ ತಡರಾತ್ರಿ ಸೇನೆ ಮತ್ತು ಪೊಲೀಸರ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಗೂಲ್ ಉಪವಿಭಾಗದ ಸಂಗಲ್ದನ್ ಅರಣ್ಯದಲ್ಲಿ ಚೀಲ ಬಿದ್ದಿರುವುದನ್ನು ತಂಡ ಪತ್ತೆಮಾಡಿದೆ ಎಂದು ಅವರು ತಿಳಿಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಕೆಲವರ ಅನುಮಾನಾಸ್ಪದ ಚಲನವಲನದ ಹಿನ್ನೆಲೆಯಲ್ಲಿ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯ ಸಂದರ್ಭದಲ್ಲಿ ಯಾರನ್ನೂ ಬಂಧಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳವು ಬ್ಯಾಗ್‌ನಲ್ಲಿ ಮೂರು ಐಇಡಿಗಳು ಇರುವುದನ್ನು ಖಚಿತಪಡಿಸಿದೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ದಾಳಿ ನಡೆಸಲು ಯೋಜಿಸಿರುವ ಶಂಕಿತ ಭಯೋತ್ಪಾದಕರು ಈ ಬ್ಯಾಗುಗಳನ್ನು ಇಟ್ಟಿರುವುದಾಗಿ ಶಂಕಿಸಲಾಗಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT