ಶಶಿ ತರೂರ್ 
ದೇಶ

ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಕೆಲ ನಾಯಕರಿಂದ ಖರ್ಗೆಗೆ ಬಹಿರಂಗ ಬೆಂಬಲ- ಶಶಿ ತರೂರ್ ಅಸಮಾಧಾನ

ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಕೆಲವು ಮುಖಂಡರು ಬಹಿರಂಗವಾಗಿ ಬೆಂಬಲಿಸುತ್ತಿರುವುದಕ್ಕೆ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಕೆಲವು ಮುಖಂಡರು ಬಹಿರಂಗವಾಗಿ ಬೆಂಬಲಿಸುತ್ತಿರುವುದಕ್ಕೆ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಲ ರಾಜ್ಯಗಳಿಗೆ ಭೇಟಿ ನೀಡಿದಾಗ ಅಲ್ಲಿನ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಹಿರಿಯ ನಾಯಕರು ನನ್ನ ಜೊತೆಗಿನ ಸಭೆಗೆ ಲಭ್ಯವಿರಲಿಲ್ಲ. ಆದರೆ, ಖರ್ಗೆ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಸ್ವಾಗತ ಕೋರಿದ್ದಾರೆ ಎಂದು ತರೂರ್ ಹೇಳಿದ್ದಾರೆ.

2014 ಮತ್ತು 2019 ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದ ಮತದಾರರನ್ನು ಮತ್ತೆ ಕರೆತರುವ ಗುರಿ ಹೊಂದಿದ್ದೇನೆ. ಎಐಸಿಸಿ ಅಧ್ಯಕ್ಷನಾಗಿ ಚುನಾಯಿತನಾದರೆ ಸಿಡಬ್ಲ್ಯೂಸಿ ಚುನಾವಣೆ ನಡೆಸಿ ಪಕ್ಷದ ಸಂವಿಧಾನವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವುದಾಗಿ ಎಂದು ಅವರು ಭರವಸೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ