ಸಾಂದರ್ಭಿಕ ಚಿತ್ರ 
ದೇಶ

ಮುಂಬೈನಲ್ಲಿ ಭಾರೀ ಮಳೆ: 8 ವಿಮಾನಗಳ ಮಾರ್ಗ ಬದಲಾವಣೆ

ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.  ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ 8 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.  ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ 8 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.

ಗೋಚರತೆ ಅತ್ಯಂತ ನಿಕೃಷ್ಟ ಮಟ್ಟಕ್ಕೆ ಇಳಿದ ಪರಿಣಾಮ ಶುಕ್ರವಾರ ನಗರದ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿದ್ದ ಎಂಟು ವಿಮಾನಗಳ ಮಾರ್ಗವನ್ನು ಸಮೀಪದ ವಿಮಾನ ನಿಲ್ದಾಣಕ್ಕೆ ಬದಲಾಯಿಸಲಾಗಿದೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿಯ ಕಾರಣ, ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು ಎಂಟು ವಿಮಾನಗಳನ್ನು ಹತ್ತಿರದ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ ಎಂದು ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂಬೈನ ಹಲವಾರು ಭಾಗಗಳಲ್ಲಿ, ವಿಶೇಷವಾಗಿ ಪೂರ್ವ ಉಪನಗರಗಳಲ್ಲಿ ಶುಕ್ರವಾರ ಸಂಜೆ ಭಾರೀ ಮಳೆಯಾಗಿದೆ.

ಬೆಳಗ್ಗೆ 8 ಗಂಟೆಯಿಂದ ನಗರದಲ್ಲಿ 8.23 ಮಿಮೀ ಮಳೆಯಾಗಿದ್ದು, ಪಶ್ಚಿಮ ಉಪನಗರಗಳಲ್ಲಿ 19.72 ಮಿಮೀ ಮತ್ತು ಪೂರ್ವ ಉಪನಗರಗಳಲ್ಲಿ 27.66 ಮಿಮೀ ಮಳೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT