ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ 
ದೇಶ

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ: ನವೆಂಬರ್ 12ಕ್ಕೆ ಮತದಾನ; ಡಿಸೆಂಬರ್‌ 8ಕ್ಕೆ ಮತಎಣಿಕೆ

ಚುನಾವಣಾ ಆಯೋಗ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಬಿಡುಗಡೆ ಬಿಡುಗಡೆ ಮಾಡಿದ್ದು, ನವೆಂಬರ್ 12ರಂದು ಮತದಾನ ನಡೆಯಲಿದೆ.

ನವದೆಹಲಿ: ಚುನಾವಣಾ ಆಯೋಗ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಬಿಡುಗಡೆ ಬಿಡುಗಡೆ ಮಾಡಿದ್ದು, ನವೆಂಬರ್ 12ರಂದು ಮತದಾನ ನಡೆಯಲಿದೆ.

ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆಗೆ ದಿನಾಂಕ ನಿಗದಿ ಮಾಡಿದ್ದು, ನವೆಂಬರ್ 12ಕ್ಕೆ ಮತದಾನ ನಡೆಯಲಿದ್ದು, 68 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್‌ 8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಹಿಮಾಚಲ ಸದನದ ಅವಧಿಯು ಜನವರಿ 8, 2023 ರಂದು ಕೊನೆಗೊಳ್ಳುತ್ತದೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸಲು ನಾವು ಬದ್ಧರಾಗಿದ್ದೇವೆ. ಯಾವುದೇ ತೊಡಕಿಲ್ಲದೆ ಚುನಾವಣೆ ಆಯೋಜನೆಗೆ ಎಲ್ಲ ಕ್ರಮ ಕೈಗೊಳ್ಳಲಾಗುವುದು. ಚುನಾವಣೆಯಲ್ಲಿ ಜನರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ನಾವು ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಮತ್ತು ನಾವು ಚುನಾವಣೆಗಳ ಮೂಲಕ ಮಹಿಳಾ ಸಬಲೀಕರಣವನ್ನು ತೋರಿಸಲು ಪ್ರಯತ್ನಿಸುತ್ತೇವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಅಂತೆಯೇ ರಾಜಕೀಯ ಪಕ್ಷಗಳು, ರಾಜ್ಯದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ಪೊಲೀಸ್ ಇಲಾಖೆ ಮತ್ತು ಪೊಲೀಸ್ ನೋಡಲ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಲ್ಲಿ 55 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಈ ಪೈಕಿ 1.86 ಲಕ್ಷ ಮತದಾರರು ಮೊದಲ ಬಾರಿಗೆ ಮತದಾನ ಮಾಡುತ್ತಿದ್ದು, 80 ವರ್ಷಕ್ಕಿಂತ ಮೇಲ್ಪಟ್ಟ 1.22 ಲಕ್ಷ ಮತ್ತು 100 ವರ್ಷಕ್ಕಿಂತ ಮೇಲ್ಪಟ್ಟ 1,184 ಮತದಾರರಿದ್ದಾರೆ ಎಂದು ಆಯೋಗ ಹೇಳಿದೆ.

ಇನ್ನು ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕವನ್ನು ನಂತರ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ. ಗುಜರಾತ್ ಅಸೆಂಬ್ಲಿಯ ಅವಧಿಯು ಫೆಬ್ರವರಿ 18, 2023 ರಂದು ಕೊನೆಗೊಳ್ಳುತ್ತದೆ. 182 ಸ್ಥಾನಗಳ ಗುಜರಾತ್ ವಿಧಾನಸಭೆಯಲ್ಲಿ 111 ಬಿಜೆಪಿ ಮತ್ತು 62 ಕಾಂಗ್ರೆಸ್ ಶಾಸಕರಿದ್ದಾರೆ.

68 ಸದಸ್ಯರ ಹಿಮಾಚಲ ಪ್ರದೇಶ ವಿಧಾನಸಭೆಗೆ ಕಳೆದ ಬಾರಿ ನಡೆದ ಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್ ಪಕ್ಷವನ್ನು ಸೋಲಿಸಿ 44 ಸ್ಥಾನಗಳನ್ನು ಗೆದ್ದುಕೊಂಡಿತು ಮತ್ತು 2017 ರಲ್ಲಿ ಕಾಂಗ್ರೆಸ್ ಕೇವಲ 21 ಸ್ಥಾನಗಳನ್ನು ಗಳಿಸಿತ್ತು. ಪ್ರಸ್ತುತ, ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ 45 ಶಾಸಕರನ್ನು ಹೊಂದಿದ್ದರೆ, ಕಾಂಗ್ರೆಸ್ 22 ಮತ್ತು ಸಿಪಿಎಂ 1 ಶಾಸಕರನ್ನು ಹೊಂದಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT