ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 2,678 ಹೊಸ ಸೋಂಕು ಪ್ರಕರಣ ಪತ್ತೆ, 10 ಸಾವು

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,678 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 10 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸಾಂದರ್ಭಿಕ ಚಿತ್ರ
Srinivasa Murthy VN
Updated On : 14 Oct 2022, 1:31 pm

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,678 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 10 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬುಧವಾರ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ 2,678 ಹೊಸ ಕೊರೋನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟು COVID-19 ಪ್ರಕರಣಗಳ ಸಂಖ್ಯೆಯನ್ನು 4,46,23,997ಕ್ಕೆ ತಲುಪಿದೆ. ಅಂತೆಯೇ ಇದೇ ಅವಧಿಯಲ್ಲಿ ದೇಶದಲ್ಲಿ 10 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 5,28,857ಕ್ಕೆ ಏರಿದೆ. 

ಇದನ್ನೂ ಓದಿ: ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 110 ಸೇರಿ ರಾಜ್ಯದಲ್ಲಿ 181 ಮಂದಿಗೆ ಪಾಸಿಟಿವ್; ಮೂವರು ಸಾವು

Advertisement

Advertisement

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 2,594 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟಾರೆ ಸಂಖ್ಯೆ 4,40,68,557ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲೂ ಇಳಿಕೆಯಾಗಿದ್ದು, ಪ್ರಸ್ತುತ ದೇಶದಲ್ಲಿ 26,583  ಸಕ್ರಿಯ ಪ್ರಕರಣಗಳಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 0.06 ಪ್ರತಿಶತವನ್ನು ಒಳಗೊಂಡಿದ್ದು, ಆದರೆ ರಾಷ್ಟ್ರೀಯ COVID-19 ಚೇತರಿಕೆ ದರವು 98.76 ಪ್ರತಿಶತಕ್ಕೆ ಏರಿಕೆಯಾಗಿದೆ. ಅಂತೆಯೇ ದೈನಂದಿನ ಸಕಾರಾತ್ಮಕತೆಯ ದರವು 1.13 ಪ್ರತಿಶತದಷ್ಟು ದಾಖಲಾಗಿದ್ದರೆ, ವಾರದ ಸಕಾರಾತ್ಮಕ ದರವು ಶೇ. 1.07 ರಷ್ಟಿದೆ. 

ಇದನ್ನೂ ಓದಿ: ಕೋವಿಡ್​ ಲಸಿಕೆಯ 'ಸೋಂಕು ಹರಡುವಿಕೆ ತಡೆ' ಪರೀಕ್ಷೆ ನಡೆಸಿರಲಿಲ್ಲ: ಫೈಜರ್ ಸಂಸ್ಥೆ ಅಧಿಕಾರಿ ಮಾಹಿತಿ

ಸಚಿವಾಲಯದ ಪ್ರಕಾರ, ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 219.21 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments