ಸಾಂದರ್ಭಿಕ ಚಿತ್ರ 
ದೇಶ

ಮಥುರಾದಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ: ಆರೋಪಿ ಬಂಧನ

ಉತ್ತರ ಪ್ರದೇಶದ ಮಥುರಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಅರಣ್ಯ ಪ್ರದೇಶದಲ್ಲಿ 10 ವರ್ಷದ ಬಾಲಕಿಯ ಬೆತ್ತಲೆ ಶವ ಪತ್ತೆಯಾಗಿದ್ದು, ಕೊಲೆಗೂ ಮುನ್ನ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಮತ್ತು ಕಣ್ಗಾವಲು ಮೂಲಕ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ವಿಚಾರಣೆ ವೇಳೆ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಕೊಂದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಎಸ್‌ಪಿ) ಅಭಿಷೇಕ್ ಯಾದವ್ ತಿಳಿಸಿದ್ದಾರೆ. 

ಅಪ್ರಾಪ್ತ ಬಾಲಕಿಯ ಕುಟುಂಬದ ಪ್ರಕಾರ, ಗುರುವಾರ ಮಧ್ಯಾಹ್ನ 3 ಗಂಟೆಗೆ ಬಾಲಕಿ ಆಟವಾಡಲು ಹೊರಗೆ ಹೋಗಿದ್ದಳು. ನಂತರ ಸಂಜೆ 5 ಗಂಟೆ ಸುಮಾರಿಗೆ ಆಕೆ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ತನ್ನ ಮನೆಯವರಿಗೆ ತಿಳಿಸುವ ಭಯದಿಂದ ಕತ್ತು ಹಿಸುಕಿ ಕೊಂದಿರುವುದಾಗಿ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಸಲು ಸದರ್ ಉಪ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ