ಸಾಂದರ್ಭಿಕ ಚಿತ್ರ 
ದೇಶ

'ನಮ್ಮ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುತ್ತಾರೆ: ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ'

ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಲು ಯಾರೂ ಒತ್ತಾಯ ಮಾಡುತ್ತಿಲ್ಲ,  ಅವರ ಇಚ್ಚೆ ಅದು. ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ, ಆದರೆ ನಮ್ಮ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಹೈದರಾಬಾದ್: ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಲು ಯಾರೂ ಒತ್ತಾಯ ಮಾಡುತ್ತಿಲ್ಲ,  ಅವರ ಇಚ್ಚೆ ಅದು. ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ, ಆದರೆ ನಮ್ಮ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಹಿಜಾಬ್ ಪ್ರಕರಣ ಕುರಿತು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿದೆ. ಇದೀಗ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಇದರ ಬೆನ್ನಲ್ಲೇ  ಅಸಾದುದ್ದೀನ್ ಒವೈಸಿ ಮತ್ತೆ ಹಿಜಾಬ್ ಪರ ಬ್ಯಾಟ್ ಬೀಸಿದ್ದಾರೆ.

ಮುಸ್ಲಿಂ ಹೆಣ್ಣುಮಕ್ಕಳ ಹಿಜಾಬ್ ತೆಗೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು.  ಮುಸ್ಲಿಂ ಹೆಣ್ಣುಮುಕ್ಕಳು ಹಿಜಾಬ್ ಧರಿಸಲು ಇಚ್ಚಿಸುತ್ತಿದ್ದಾರೆ. ಹಿಜಾಬ್ ಧರಿಸಿದ್ದಾರೆ ಎಂದರೆ ಅವರ ಬುದ್ಧಿಶಕ್ತಿಯನ್ನು ಮುಚ್ಚುತ್ತಿದ್ದಾರೆ ಎಂದರ್ಥವಲ್ಲ.  

ಹಿಜಾಬ್ ಧರಿಸುವಿಕೆಯಿಂದ ಮುಸ್ಲಿಂ ಮಹಿಳೆಯರು ಹಿಂದುಳಿಯುತ್ತಿದ್ದಾರೆ ಎಂಬ ವಾದವನ್ನು ಒವೈಸಿ ತಳ್ಳಿ ಹಾಕಿದ್ದಾರೆ. ದೇಶ ಅಭಿವೃದ್ಧಿಯಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಕೊಡುಗೆಯೂ ಅಪಾರವಾಗಿದೆ. ಹೈದರಾಬಾದ್‌ನಲ್ಲಿ ಹಲವು ಮಹಿಳೆಯರು ಡ್ರೈವರ್ ಆಗಿ ವಾಹನ ಚಲಾಯಿಸುತ್ತಿದ್ದಾರೆ. ಅವರಿಗೆ ಯಾರೂ ಹಿಜಾಬ್ ಒತ್ತಾಯಪೂರ್ವಕವಾಗಿ ಹಾಕುತ್ತಿಲ್ಲ. ಅವರ ಆಯ್ಕೆಯಾಗಿದೆ ಎಂದು ಓವೈಸಿ ಹೇಳಿದ್ದಾರೆ.

ಹಿಂದೂ ಸಿಖ್, ಕ್ರಿಶ್ಚಿಯನ್ ಮಕ್ಕಳು ತಮ್ಮ ಧರ್ಮದ ಉಡುಪು ಧರಿಸಿ ಶಾಲೆಗೆ ತೆರಳಲು ಅನುಮತಿ ಇದೆ. ಆದರೆ ಮುಸ್ಲಿಂ ಹೆಣ್ಣುಮಕ್ಕಳಿಗೆ ನಿರಾಕರಿಸಲಾಗುತ್ತಿದೆ. ಈ ತಾರತಮ್ಯ ಯಾಕೆ? ಒಂದು ದಿನ ಹಿಜಾಬ್ ಧರಿಸಿದ ಮುಸ್ಲಿಮ್ ಮಹಿಳೆ ಭಾರತದ ಪ್ರಧಾನಿಯಾಗುತ್ತಾರೆ. ಇದು ನನ್ನ ಕನಸು ಎಂದಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ತಮಿಳುನಾಡು ಸಿಎಂ ವಿಜಯ್-ಪ್ರಧಾನಿ ಮೋದಿ ಭೇಟಿ: ಎರಡು ದೊಡ್ಡ ಬೇಡಿಕೆ; ಇಲ್ಲಿದೆ ವಿವರ..

'ಬಹುಶಃ ರಾಹುಲ್ ಗಾಂಧಿಗೆ ಈಗ ತೃಪ್ತಿಯಾಗಿರಬಹುದು': ED ದಾಳಿ ಕುರಿತು ಮಾಜಿ ಸಿಎಂ ಪಿಣರಾಯಿ ವಿಜಯನ್ ಕಿಡಿ

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

SCROLL FOR NEXT