ದೇಶ

"ಎಲ್ ಪಿಜಿ ಬೆಲೆ 400 ರೂ ಇದ್ದಾಗ ಮಹಿಳೆಯರಿಗೆ  ಸಂಕಷ್ಟ ಎಂದಿದ್ದರು ಮೋದಿ, 1000 ರೂ. ಆಗಿದೆ ಈಗೇನು  ಮಾಡಬೇಕು?": ರಾಹುಲ್

Srinivas Rao BV

ಬಳ್ಳಾರಿ: "ಮೋದಿ ಪ್ರಧಾನಮಂತ್ರಿಯಾಗಿ  ಅಧಿಕಾರಕ್ಕೆ ಬರುವ ಮುನ್ನ ತಮ್ಮ ಭಾಷಣದಲ್ಲಿ ಅಡುಗೆ ಅನಿಲದ ಸಿಲಿಡಂರ್ 400 ರೂ. ಇದೆ. ಇದರಿಂದ ದೇಶದ ಮಹಿಳೆಯರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ್ದರು. ಇಂದು ಅದೇ ಸಿಲಿಂಡರ್ 1000 ರೂ. ಆಗಿದೆ. ಈಗ ಪ್ರಧಾನಿಗಳು ನಮ್ಮ ಮಹಿಳೆಯರು ಏನು ಮಾಡಬೇಕು ಎಂದು ಹೇಳುತ್ತಿಲ್ಲ" ಎಂದು ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಭಾರತ ಜೋಡೋ ಯಾತ್ರೆ ಭಾಗವಾಗಿ ಬಳ್ಳಾರಿಯಲ್ಲಿ ಶನಿವಾರ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಅವರು ಮಾತನಾಡಿದ ಅವರು, ಈ ಯಾತ್ರೆ ನಿರುದ್ಯೋಗ ವಿರುದ್ಧ ಧ್ವನಿ ಎತ್ತಲು ಆರಂಭಿಸಲಾಗಿದೆ. ನಿರುದ್ಯೋಗ, ದ್ವೇಷದ ಜತೆಗೆ ಬೆಲೆ ಏರಿಕೆ ಮೂಲಕ ನಿಮ್ಮ ಬದುಕು ದುಸ್ಥರವಾಗಿದೆ. ಪದಾರ್ಥಗಳ ಬೆಲೆ ಗಗನಕ್ಕೇರಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂದಿ ಅಕ್ರೋಶ ವ್ಯಕ್ತಪಡಿಸಿದರು. ಇಂಧನ ತೈಲ ಬೆಲೆ ಆತಿಹಾಸಿಕ ಏರಿಕೆ ಆಗಿದೆ. ನಿರುದ್ಯೋಗ ಮತ್ತು ಬೆಲೆ ಏರಿಕೆ ಮಧ್ಯೆ ಸಿಕ್ಕಿ ನರಳುವಂತಾಗಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ನೀವು ಪೊಲೀಸ್ ಇಲಾಖೆ ಸೇರಬೇಕಾದರೆ, 80 ಲಕ್ಷ ಲಂಚ ನೀಡಬೇಕು. ಹಣವಿದ್ದರೆ ಸರ್ಕಾರಿ ಹುದ್ದೆ ಖರೀದಿಸಬಹುದು. ಹಣವಿಲ್ಲದಿದ್ದರೆ ಜೀವನಪೂರ್ತಿ ನಿರುದ್ಯೋಗಿಗಳಾಗಿರುತ್ತೀರಿ. ಸಹಕಾರಿ ಬ್ಯಾಂಕುಗಳಲ್ಲಿ, ಸಹಯಕ ಪ್ರಾದ್ಯಾಪಕ ಹುದ್ದೆ ನೇಮಕಾತಿಯಲ್ಲಿ ಹಗರಣ ನಡೆಯುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ 40% ಕಮಿಷನ್ ಸರ್ಕಾರ ಎಂದು ಬಿರುದು ನೀಡಲಾಗಿದೆ. ಏನೇ ಕೆಲಸ ಆಗಬೇಕಾದರೂ 40% ಕಮಿಷನ್ ನೀಡಬೇಕು. ಎಂದು  ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಯಾತ್ರೆಯಲ್ಲಿ ರೈತರನ್ನು ಭೇಟಿಯಾಗುತ್ತಿದ್ದು, ಎಲ್ಲ ರೈತರ ಪರಿಸ್ಥಿತಿ ಕೇಳುತ್ತಿದ್ದೇನೆ. ಅವರು ಕೃಷಿಗೆ ಎಷ್ಟು ಹಣ ಹಾಕುತ್ತಾನೆ, ಅದರಿಂದ ಎಷ್ಟು ಗಳಿಸುತ್ತಾರೆ ಎಂದು ಕೇಳುತ್ತೇನೆ. ಆಗ ಅವರು ಆರ್ಥಿಕ ಸಹಾಯ ವಿಲ್ಲದೆ ರೈತರು ಬದುಕಲು ಸಾಧ್ಯವಿಲ್ಲ ಎಂಬ ಉತ್ತರ ನೀಡುತ್ತಾರೆ. ರೈತರಿಗೆ ನೆರವಾಗುವ ಬದಲು, ದೇಶದ ಇತಿಹಾಸದಲ್ಲಿ ರೈತ ಶೇ.5 ರಷ್ಟು ರಸಗೊಬ್ಬರಕ್ಕೆ, ಶೇ.12ರಷ್ಟು ಟ್ರ್ಯಾಕ್ಟರ್ಗಳ ಮೇಲೆ, ಶೇ.18ರಷ್ಟು ತೆರಿಗೆಯನ್ನು ಕೀಟನಾಶಕಗಳಿಗೆ ನೀಡಬೇಕಿದೆ. ರೈತರು ತಮಗೆ ಕನಿಷ್ಠ ಬೆಂಬಲ ಬೆಲೆ ಸಿಗುತ್ತಿಲ್ಲ ಎಂದಿದ್ದು, ಇದು ರಾಜ್ಯ ಹಾಗೂ ದೇಶದ ರೈತರು ಎದುರಿಸುತ್ತಿರುವ ಸಮಸ್ಯೆ. ಎಂದು ವಿವರಿಸಿದರು.

SCROLL FOR NEXT