ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: 24 ಗಂಟೆಗಳಲ್ಲಿ ದೇಶದಲ್ಲಿ 2,401 ಹೊಸ ಕೋವಿಡ್ ಪ್ರಕರಣ, ಮೃತರ ಸಂಖ್ಯೆ ಏರಿಕೆ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,401 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,28,828 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,401 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,28,828 ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 26,625 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳದಲ್ಲಿ 16 ಮಂದಿ ಸೇರಿದಂತೆ 21 ಮಂದಿ ಸಾವಿಗೀಡಾಗಿದ್ದು, ಈವರೆಗೆ 5,28,895 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.06 ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.76ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಸದ್ಯ ದೈನಂದಿನ ಪಾಸಿಟಿವಿಟಿ ದರ ಶೇ 1.04ರಷ್ಟಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ. ದೇಶದಾದ್ಯಂತ ಈವರೆಗೆ 4,40,73,308 ಜನರು ಕೊರೊನಾವೈರಸ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಸಚಿವಾಲಯದ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ 219.32 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ