ಅರವಿಂದ ಕೇಜ್ರಿವಾಲ್ 
ದೇಶ

'ಎರಡನೇ ಸ್ವಾತಂತ್ರ್ಯ ಹೋರಾಟ'; ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್‌ರನ್ನು ಭಗತ್‌ ಸಿಂಗ್‌ರಿಗೆ ಹೋಲಿಸಿದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಕೇಂದ್ರದೊಂದಿಗಿನ ತಮ್ಮ ಸರ್ಕಾರದ ಹೋರಾಟವನ್ನು 'ಎರಡನೇ ಸ್ವಾತಂತ್ರ್ಯ ಹೋರಾಟ' ಮತ್ತು ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಹಾಗೂ ಸತ್ಯೇಂದ್ರ ಜೈನ್ ಅವರನ್ನು ಹುತಾತ್ಮ ಭಗತ್ ಸಿಂಗ್‌ರಿಗೆ ಹೋಲಿಸಿದ್ದಾರೆ.

ನವದೆಹಲಿ: ಮನೀಶ್ ಸಿಸೋಡಿಯಾ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಕೇಂದ್ರದೊಂದಿಗಿನ ತಮ್ಮ ಸರ್ಕಾರದ ಹೋರಾಟವನ್ನು 'ಎರಡನೇ ಸ್ವಾತಂತ್ರ್ಯ ಹೋರಾಟ' ಮತ್ತು ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಹಾಗೂ ಸತ್ಯೇಂದ್ರ ಜೈನ್ ಅವರನ್ನು ಹುತಾತ್ಮ ಭಗತ್ ಸಿಂಗ್‌ರಿಗೆ ಹೋಲಿಸಿದ್ದಾರೆ.

ಈಗ ರದ್ದಾಗಿರುವ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸೋಮವಾರ ವಿಚಾರಣೆಗೆ ಕರೆದ ನಂತರ ಕೇಜ್ರಿವಾಲ್ ಈ ಹೇಳಿಕೆ ನೀಡಿದ್ದಾರೆ.

ತನಿಖಾ ಸಂಸ್ಥೆಯು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನಿಗೆ ಸೋಮವಾರ ಬೆಳಗ್ಗೆ 11 ಗಂಟೆಗೆ ಇಲ್ಲಿನ ಪ್ರಧಾನ ಕಛೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಹೇಳಿದೆ.

'ಜೈಲು ಕಂಬಿಗಳು ಮತ್ತು ನೇಣು ಕುಣಿಕೆಗಳು ಭಗತ್ ಸಿಂಗ್ ಅವರ ದೃಢವಾದ ಉದ್ದೇಶಗಳನ್ನು ತಡೆಯಲು ಸಾಧ್ಯವಾಗಲಿಲ್ಲ. ಇದು ಸ್ವಾತಂತ್ರ್ಯಕ್ಕಾಗಿ ನಡೆಯುತ್ತಿರುವ ಎರಡನೇ ಹೋರಾಟ. ಮನೀಶ್ ಮತ್ತು ಸತ್ಯೇಂದ್ರ ಇಂದಿನ ಭಗತ್ ಸಿಂಗ್‌ಗಳು. 75 ವರ್ಷಗಳ ನಂತರ ಬಡವರಿಗೆ ಉತ್ತಮ ಶಿಕ್ಷಣ ನೀಡಿ ಉಜ್ವಲ ಭವಿಷ್ಯದ ಭರವಸೆ ಮೂಡಿಸಿದ ಶಿಕ್ಷಣ ಸಚಿವರು ನಮ್ಮ ದೇಶಕ್ಕೆ ಸಿಕ್ಕಿದ್ದಾರೆ. ಕೋಟ್ಯಂತರ ಬಡವರ ಪ್ರಾರ್ಥನೆ ನಿಮ್ಮೊಂದಿಗಿದೆ' ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಸಮನ್ಸ್ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಸಿಸೋಡಿಯಾ, 'ನನ್ನ ಮನೆಯಲ್ಲಿ 14 ಗಂಟೆಗಳ ಕಾಲ ಸಿಬಿಐ ದಾಳಿ ನಡೆಸಲಾಗಿದೆ. ಆದರೆ, ಏನೂ ಪತ್ತೆಯಾಗಿಲ್ಲ. ನನ್ನ ಬ್ಯಾಂಕ್ ಲಾಕರ್ ಅನ್ನು ಹುಡುಕಿದೆ. ಅದರಿಂದಲೂ ಏನೂ ಸಿಕ್ಕಿಲ್ಲ. ನನ್ನ ಗ್ರಾಮದಲ್ಲಿಯೂ ಅವರಿಗೆ ಏನೂ ಸಿಗಲಿಲ್ಲ. ಈಗ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಸಿಬಿಐ ಹೆಡ್‌ಕ್ವಾರ್ಟರ್ಸ್‌ಗೆ ಬರುವಂತೆ ಕರೆದಿದ್ದಾರೆ. ನಾನು ಹೋಗಿ ನನ್ನ ಸಂಪೂರ್ಣ ಸಹಕಾರ ನೀಡುತ್ತೇನೆ. ಸತ್ಯಮೇವ ಜಯತೆ' ಎಂದಿದ್ದಾರೆ.

ಇಂಡೋ ಸ್ಪಿರಿಟ್ಸ್‌ನ ಮಾಲೀಕ ಸಮೀರ್ ಮಹೇಂದ್ರು, ಗುರುಗ್ರಾಮ್‌ದ ಬಡ್ಡಿ ರೀಟೇಲ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಅಮಿತ್ ಅರೋರಾ ಮತ್ತು ಇಂಡಿಯಾ ಅಹೆಡ್ ನ್ಯೂಸ್ ವ್ಯವಸ್ಥಾಪಕ ನಿರ್ದೇಶಕ ಮೂತಾ ಗೌತಮ್ ಸೇರಿದಂತೆ ಹಲವರನ್ನು ಈ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಶ್ನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT