ಮನೀಶ್ ಸಿಸೋಡಿಯಾ 
ದೇಶ

ಎಎಪಿ ತೊರೆಯುವಂತೆ ಸಿಬಿಐ ಕಚೇರಿಯಲ್ಲಿ ಒತ್ತಡ- ಮನೀಶ್ ಸಿಸೋಡಿಯಾ

ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್  ಸಿಸೋಡಿಯಾ ಅವರನ್ನು ಸೋಮವಾರ ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ. 

ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿ, ಉದ್ಯಮಿ ವಿಜಯ್ ನಾಯರ್ ಸೇರಿದಂತೆ ಇತರ ಆರೋಪಿಗಳೊಂದಿಗಿನ ಅವರ ಸಂಬಂಧಗಳು ಮತ್ತು ಪ್ರಕರಣದ ಶೋಧದ ವೇಳೆ ಪತ್ತೆಯಾದ ದಾಖಲೆಗಳ ವಿವಿಧ ಅಂಶಗಳ ಮೇಲೆ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್  ಸಿಸೋಡಿಯಾ ಅವರನ್ನು ಸೋಮವಾರ ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ. 

ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮನೀಶ್ ಸಿಸೋಡಿಯಾ.  ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹಗರಣದ ಸಮಸ್ಯೆ ಇಲ್ಲದಿರುವುದನ್ನು ಸಿಬಿಐ ಕಚೇರಿಯಲ್ಲಿ ನೋಡಿದ್ದೇನೆ. ಇಡೀ ಕೇಸ್ ನಕಲಿಯಾಗಿದೆ. ನನ್ನ ವಿರುದ್ದ ಯಾವುದೇ ಹಗರಣ ಇಲ್ಲದಿರುವುದು 9 ಗಂಟೆಗಳ ವಿಚಾರಣೆಯಿಂದ ಅರ್ಥವಾಯಿತು ಆದರೆ, ಇದು ದೆಹಲಿಯಲ್ಲಿ ಆಪರೇಷನ್ ಕಮಲ ಯಶಸ್ವಿಗೊಳಿಸುವ ಪ್ರಯತ್ನವಾಗಿದೆ ಎಂದರು. 

ಎಎಪಿಯಿಂದ ಹೊರ ಹೋಗು, ಇಲ್ಲವಾದರೆ ನನ್ನ ವಿರುದ್ಧ ಕೇಸ್ ದಾಖಲಿಸುವುದಾಗಿ ಸಿಬಿಐ ಕಚೇರಿಯಲ್ಲಿ ಹೇಳಲಾಯಿತು. ಆದರೆ ಬಿಜೆಪಿಗಾಗಿ ಎಎಪಿ ತೊರೆಯುವುದಿಲ್ಲ ಎಂದು ಹೇಳಿದೆ. ನನ್ನನ್ನು ಸಿಎಂ ಮಾಡುವುದಾಗಿ ಅವರು ಹೇಳಿದರು ಎಂದು ಸಿಸೋಡಿಯಾ ಆರೋಪಿಸಿದರು. ಸಿಸೋಡಿಯಾ ನೀಡಿರುವ ಉತ್ತರಗಳನ್ನು ಸಿಬಿಐ ಪರಿಶೀಲಿಸಲಿದೆ ಒಂದು ವೇಳೆ ಅಗತ್ಯವಿದ್ದರೆ ಮತ್ತೆ ಸಮನ್ಸ್ ನೀಡಲಾಗುವುದು, ನಾಳೆ ಯಾವುದೇ ಸಮನ್ಸ್ ನೀಡಿಲ್ಲ ಎಂದು ಸಿಬಿಐ ಅಧಿಕಾರಿ ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ 11.10ರ ಸುಮಾರಿಗೆ ಸಿಸೋಡಿಯಾ ದೆಹಲಿಯ ಸಿಬಿಐ ಕಚೇರಿಗೆ ಆಗಮಿಸಿದರು. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನಡೆದಿರುವ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸೋಡಿಯಾ ಅವರಿಗೆ ಸಿಬಿಐ ಸಮನ್ಸ್ ನೀಡಿತ್ತು. ವೃತ್ತಿಯಲ್ಲಿ ವಕೀಲರೂ ಆಗಿರುವ ಎಎಪಿ ನಾಯಕ ಸೋಮನಾಥ್ ಭಾರ್ತಿ ಅವರೊಂದಿಗೆ ಸಿಸೋಡಿಯಾ ಸಿಬಿಐ ಕಚೇರಿಗೆ ಆಗಮಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT