ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ 2022: ಎಐಸಿಸಿ ಕಚೇರಿಯಲ್ಲಿ ಮತದಾನ ಆರಂಭ, ಖರ್ಗೆ-ತರೂರ್ ನಡುವೆ ಪೈಪೋಟಿ

ದೇಶದ ಅತಿ ಹಳೆಯ ಪಕ್ಷವಾದ ಕಾಂಗ್ರೆಸ್'ನ ಅಧ್ಯಕ್ಷ ಗಾದಿಗೆ ಸೋಮವಾರ ಮತದಾನ ಆರಂಭವಾಗಿದ್ದು, ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ.

ಮತದಾನ ಮಾಡುತ್ತಿರುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ
Manjula VN
Updated On : 17 Oct 2022, 11:03 am

ನವದೆಹಲಿ: ದೇಶದ ಅತಿ ಹಳೆಯ ಪಕ್ಷವಾದ ಕಾಂಗ್ರೆಸ್'ನ ಅಧ್ಯಕ್ಷ ಗಾದಿಗೆ ಸೋಮವಾರ ಮತದಾನ ಆರಂಭವಾಗಿದ್ದು, ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ. 

ಬೆಳಿಗ್ಗೆ 10 ಗಂಟೆಯಿಂದಲೇ ಎಐಸಿಸಿ ಕಚೇರಿಯಲ್ಲಿ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. 

ಇದನ್ನೂ ಓದಿ: 24 ವರ್ಷಗಳ ನಂತರ ಗಾಂಧಿಯೇತರರು ಕಾಂಗ್ರೆಸ್ ಮುಖ್ಯಸ್ಥರಾಗಲು ಚುನಾವಣೆ: ಖರ್ಗೆ, ತರೂರ್ ನಡುವೆ ಹಣಾಹಣಿ

Advertisement

Advertisement

ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸತತ ಅವಿರೋಧ ಆಯ್ಕೆಗಳ ಬಳಿಕ 22 ವರ್ಷಗಳ ನಂತರ ಚುನಾವಣೆ ನಡೆಯುತ್ತಿದ್ದು, ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಅವರು ಚುನಾವಣೆಯಲ್ಲಿ ಮುಖಾಮುಖಿಯಾಗಿದ್ದಾರೆ. ಪಕ್ಷದ 9100 ಪ್ರತಿನಿಧಿಗಳು ಇವರ ಹಣೆಬರಹ ನಿರ್ಧರಿಸಲಿದ್ದಾರೆ. 

ಚುನಾವಣೆಗೆ ದೇಶದ ವಿವಿಧ ಭಾಗಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 65 ಮತಗಟ್ಟೆಗಳನ್ನು ತೆರೆಯಲಾಗಿದೆ. ಅ.19ರಂದು ಐಐಸಿಸಿ ಕಚೇರಿಯಲ್ಲಿ ಮತ ಎಣಿಕೆ ನಡೆಯಲಿದ್ದು, ಅಂದು ಹೊಸ ಅಧ್ಯಕ್ಷರ ಘೋಷಣೆಯಾಗಲಿದೆ.

ಇದನ್ನೂ ಓದಿ: ಎಐಸಿಸಿ ಅಧ್ಯಕ್ಷೀಯ ಚುನಾವಣೆ: ದಯವಿಟ್ಟು ನೇತಾಗಿರಿ ಬೇಡ, ಖರ್ಗೆ ಬಣಕ್ಕೆ ಶಶಿ ತರೂರ್ ಕಿವಿಮಾತು

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರೆ ಕಾಂಗ್ರೆಸ್ ನಾಯಕರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement