ದೇಶ

ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಗೆ ಸಹಾಯ ಮಾಡುವುದೇ ನಮ್ಮ ಗುರಿ: ತಮಿಳುನಾಡು ಸಿಎಂ ಸ್ಟಾಲಿನ್

Lingaraj Badiger

ಚೆನ್ನೈ: 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ ಎಲ್ಲಾ 39 ಲೋಕಸಭಾ ಸ್ಥಾನಗಳನ್ನು ಮತ್ತು ಪುದುಚೇರಿಯ ಏಕೈಕ ಸ್ಥಾನವನ್ನು ಗೆಲ್ಲುವುದು ಮತ್ತು ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಗೆ ಸಹಾಯ ಮಾಡುವುದೇ ಡಿಎಂಕೆಯ ಮೊದಲ ಗುರಿಯಾಗಿದೆ ಎಂದು ಪಕ್ಷದ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಹೇಳಿದ್ದಾರೆ.

ಸಾಮಾಜಿಕ ನ್ಯಾಯ ಮತ್ತು ಒಕ್ಕೂಟ ತತ್ವಗಳಿಗೆ ಬದ್ಧವಾಗಿರುವ ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಗೆ ಅನುಕೂಲ ಮಾಡಿಕೊಡುವುದು ನಮ್ಮ ಮುಂದಿನ ಗುರಿಯಾಗಿದೆ ಎಂದಿದ್ದಾರೆ.

"2024 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ನಾವು ಇದನ್ನು ಗುರಿಯಾಗಿಟ್ಟುಕೊಂಡು ರಾಜಕೀಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ" ಎಂದು ಸ್ಟಾಲಿನ್ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

"ನರ್ಪತುಂ ನಮತೇ, ನಾಡುಂ ನಮತೇ" ಎಂಬ ತಮಿಳು ರಾಜಕೀಯ ಘೋಷಣೆಯೊಂದಿಗೆ ಡಿಎಂಕೆ ಅಧಿಕಾರಕ್ಕೆ ಬಂದಿದೆ. ಇದನ್ನು ಹೀಗೆ ಅನುವಾದಿಸಬಹುದು "ಎಲ್ಲಾ 40 ಲೋಕಸಭಾ ಕ್ಷೇತ್ರಗಳು ನಮ್ಮದೇ, ದೇಶವೂ ನಮ್ಮದೇ" ಎಂದಿದ್ದಾರೆ.

SCROLL FOR NEXT