ಯುವಕನನ್ನು ಬೈಕ್ ಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಕಿಡಿಗೇಡಿಗಳು! 
ದೇಶ

ಸಾಲ ಮರುಪಾವತಿ ಮಾಡದ್ದಕ್ಕೆ ಉಗ್ರ ಶಿಕ್ಷೆ: ಯುವಕನನ್ನು ಬೈಕ್ ಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಕಿಡಿಗೇಡಿಗಳು!

ಯುವಕನೋರ್ವನನ್ನು ದ್ವಿಚಕ್ರವಾಹನಕ್ಕೆ ಕಟ್ಟಿ ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ಎಳೆದೊಯ್ದಿರುವ ಘಟನೆ ಕಟಕ್ ನಲ್ಲಿ ನಡೆದಿದ್ದು, ಅಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಆತಂಕ ಮೂಡಿದೆ. 

ಕಟಕ್: ಯುವಕನೋರ್ವನನ್ನು ದ್ವಿಚಕ್ರವಾಹನಕ್ಕೆ ಕಟ್ಟಿ ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ಎಳೆದೊಯ್ದಿರುವ ಘಟನೆ ಕಟಕ್ ನಲ್ಲಿ ನಡೆದಿದ್ದು, ಅಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಆತಂಕ ಮೂಡಿದೆ. ಯುವಕನನ್ನು ಕಟ್ಟಿ ಹಾಕಿ ಎಳೆದೊಯ್ಯುತ್ತಿರುವ ವೀಡಿಯೋ ವೈರಲ್ ಆಗತೊಡಗಿದ್ದು, 2 ಕಿ.ಮೀ ವರೆಗೂ ಯುವಕನನ್ನು ಎಳೆದೊಯ್ಯಲಾಗಿದೆ. 

ಸ್ಥಳೀಯರು ಈ ಕೃತ್ಯವನ್ನು ತಡೆಯಲು ಯತ್ನಿಸಿದರಾದರೂ, ದ್ವಿಚಕ್ರವಾಹನದಲ್ಲಿದ್ದ ಮಂದಿ ಮುಂದಾಗುವ ಪರಿಣಾಮಗಳ ಬಗ್ಗೆ ಬೆದರಿಕೆ ಹಾಕಿ ಈ ವಿಷಯದಲ್ಲಿ ಮಧ್ಯಪ್ರವೇಶಿಸದಂತೆ ಎಚ್ಚರಿಕೆ ನೀಡಿದ್ದಾರೆ. 

ಯುವಕನನ್ನು ಎಳೆದೊಯ್ದ ಮಾರ್ಗದಲ್ಲಿ ಮೂರು ಟ್ರಾಫಿಕ್ ಪೋಸ್ಟ್ ಗಳಿದ್ದು, ಈ ಘಟನೆ ಪೊಲೀಸರ ಕಾರ್ಯಕ್ಷಮತೆ ಬಗ್ಗೆ ಪ್ರಶ್ನೆಗಳು ಉದ್ಭವಿಸುವಂತೆ ಮಾಡಿದೆ. ಅಚ್ಚರಿಯೆಂದರೆ ಯಾವುದೇ ಪೊಲೀಸ್ ಗಸ್ತು ತಂಡ ಅಥವಾ ಸ್ಥಳೀಯ ಪೊಲೀಸರೂ ಈ ಕೃತ್ಯವನ್ನು ತಡೆಯಲು ಮುಂದಾಗಿಲ್ಲ. ಮಾನವ ಹಕ್ಕುಗಳ ಕಾರ್ಯಕರ್ತರು ಈ ಘಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಡಿಸಿಪಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ, ಸಿಸಿಟಿವಿ ಕ್ಯಾಮರಾಗಳು, ನಿಯಂತ್ರಣ ಕೊಠಡಿಯ ಮೂಲಕ ನಗರದಲ್ಲಿನ ಕಾನೂನು ಸುವ್ಯವಸ್ಥೆಯನ್ನು ಕಾಪಾಡುತ್ತಿರುವುದಾಗಿ ಹೇಳುತ್ತಾರೆ. ಆದರೆ ಪೊಲೀಸ್ ನಿಯಂತ್ರಣ ಕೊಠಡಿಯಾಗಲೀ, ಟ್ರಾಫಿಕ್ ಸಿಬ್ಬಂದಿಗಳಾಗಲೀ ತಡೆಯಲಿಲ್ಲ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಕಟಕ್ ಡಿಸಿಪಿ ಪಿನಾಕ್ ಮಿಶ್ರಾ ಮಾತನಾಡಿದ್ದು, ವೀಡಿಯೋ ಆಧಾರದಲ್ಲಿ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT