ಉಮರ್ ಖಾಲಿದ್ 
ದೇಶ

2020ರ ದೆಹಲಿ ಗಲಭೆ ಪ್ರಕರಣ: ಯುಎಪಿಎ ಪ್ರಕರಣದಲ್ಲಿ ಉಮರ್ ಖಾಲಿದ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

2020ರ ಫೆಬ್ರವರಿಯಲ್ಲಿ ಇಲ್ಲಿ ನಡೆದ ಗಲಭೆಗಳ ಹಿಂದಿನ ಪಿತೂರಿ ಆರೋಪಕ್ಕೆ ಸಂಬಂಧಿಸಿದಂತೆ ಯುಎಪಿಎ ಪ್ರಕರಣದಲ್ಲಿ ಆರೋಪಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.

ನವದೆಹಲಿ: 2020ರ ಫೆಬ್ರವರಿಯಲ್ಲಿ ಇಲ್ಲಿ ನಡೆದ ಗಲಭೆಗಳ ಹಿಂದಿನ ಪಿತೂರಿ ಆರೋಪಕ್ಕೆ ಸಂಬಂಧಿಸಿದಂತೆ ಯುಎಪಿಎ ಪ್ರಕರಣದಲ್ಲಿ ಆರೋಪಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.

'ಜಾಮೀನು ಪಡೆಯಲು ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ಸೂಕ್ತ ಕಾರಣವಿಲ್ಲ'. ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ರಜನೀಶ್ ಭಟ್ನಾಗರ್ ಅವರಿದ್ದ ಪೀಠ ಹೇಳಿದೆ.

2020ರ ಸೆಪ್ಟೆಂಬರ್‌ನಲ್ಲಿ ದೆಹಲಿ ಪೊಲೀಸರಿಂದ ಬಂಧಿಸಲ್ಪಿರುವ ಖಾಲಿದ್, ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರದಲ್ಲಿ ಯಾವುದೇ ಅಪರಾಧ ಪಾತ್ರವನ್ನು ಹೊಂದಿಲ್ಲ ಅಥವಾ ಪಿತೂರಿಯ ಪ್ರಕರಣದ ಇತರ ಯಾವುದೇ ಆರೋಪಿಗಳೊಂದಿಗೆ ಯಾವುದೇ ಸಂಪರ್ಕವನ್ನು ಹೊಂದಿಲ್ಲ ಎಂಬ ಆಧಾರದ ಮೇಲೆ ಜಾಮೀನು ಕೋರಿದ್ದರು.

ಜಾಮೀನು ಅರ್ಜಿಯನ್ನು ದೆಹಲಿ ಪೊಲೀಸರು ವಿರೋಧಿಸಿದ್ದರು.

ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರ ಹಲವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯು (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ 53 ಜನರ ಸಾವಿಗೀಡಾದ ಮತ್ತು 700ಕ್ಕೂ ಅಧಿಕ ಜನರು ಗಾಯಗೊಂಡ 2020 ರ ಫೆಬ್ರುವರಿಯಲ್ಲಿನ ಗಲಭೆಗಳ 'ಮಾಸ್ಟರ್‌ ಮೈಂಡ್‌ಗಳು' ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.

ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ನಡೆದ ಪ್ರತಿಭಟನೆಗಳ ವೇಳೆ ದೆಹಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.
ಖಾಲಿದ್ ಅಲ್ಲದೆ, ಕಾರ್ಯಕರ್ತ ಖಾಲಿದ್ ಸೈಫಿ, ಜೆಎನ್‌ಯು ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಾಂಗನಾ ಕಲಿತಾ, ಜಾಮಿಯಾ ಸಮನ್ವಯ ಸಮಿತಿ ಸದಸ್ಯರಾದ ಸಫೂರ ಜರ್ಗರ್, ಎಎಪಿ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಮತ್ತು ಹಲವರ ವಿರುದ್ಧವೂ ಕಠಿಣ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT