ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಅತ್ಯಾಚಾರಿಗಳ ಪರವಾಗಿದ್ದಾರೆ ಪ್ರಧಾನಿ ಮೋದಿ: ರಾಹುಲ್ ಗಾಂಧಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅತ್ಯಾಚಾರಿಗಳ ಪರವಾಗಿದ್ದಾರೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ
Manjula VN
Updated On : 18 Oct 2022, 2:22 pm

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅತ್ಯಾಚಾರಿಗಳ ಪರವಾಗಿದ್ದಾರೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. 

ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಆಗಸ್ಟ್‌ನಲ್ಲಿ ಬಿಡುಗಡೆ ಮಾಡಿದ ಕ್ರಮಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೆಂಪುಕೋಟೆಯಿಂದ, ಮಹಿಳೆಯರನ್ನು ಗೌರವಿಸುವ ಬಗ್ಗೆ ಪ್ರಧಾನಿ ಮೋದಿ ಮಾತನಾಡುತ್ತಾರೆ. ಆದರೆ, ವಾಸ್ತವದಲ್ಲಿ ಅತ್ಯಾಚಾರಿಗಳ ಪರ ನಿಲ್ಲುತ್ತಾರೆ ಎಂದು ಟೀಕಿಸಿದ್ದಾರೆ. 

Advertisement

Advertisement

ಪ್ರಧಾನ ಮಂತ್ರಿಗಳ ಭರವಸೆ ಮತ್ತು ಉದ್ದೇಶಗಳ ನಡುವೆ ಇರುವ ವ್ಯತ್ಯಾಸ ಸ್ಪಷ್ಟವಾಗಿದೆ. ಪ್ರಧಾನಿಯವರೇ ಮಹಿಳೆಯರಿಗೆ ಮೋಸ ಮಾಡಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ. 

ಇದನ್ನೂ ಓದಿ: ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಶೀಘ್ರ ಬಿಡುಗಡೆಗೆ ಕೇಂದ್ರ ಅನುಮೋದನೆ ನೀಡಿತ್ತು; ಸುಪ್ರೀಂ ವಿಚಾರಣೆಗೂ ಮುನ್ನ ವಕೀಲ

ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳನ್ನು ಅವಧಿಗೂ ಮುನ್ನವೇ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ಗುಜರಾತ್‌ನಲ್ಲಿನ ಬಿಜೆಪಿ ಸರ್ಕಾರ, ಶಿಫಾರಸು ಸಲ್ಲಿಸಿತ್ತು. ಅದಕ್ಕೆ ಕೇಂದ್ರದಲ್ಲಿನ ಬಿಜೆಪಿ ಸರ್ಕಾರ 2 ವಾರಕ್ಕೂ ಮುನ್ನವೇ ಅಂಗೀಕಾರ ನೀಡಿತ್ತು ಎನ್ನುವುದು ಬಹಿರಂಗವಾಗಿದೆ. ಈ ಕುರಿತು ರಾಹುಲ್ ಗಾಂಧಿಯವರು ಕಿಡಿಕಾರಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments