ಸನ್ನಾ ಇರ್ಷಾದ್ ಮಟ್ಟೂ 
ದೇಶ

ಅಮೆರಿಕಕ್ಕೆ ತೆರಳದಂತೆ ಕಾಶ್ಮೀರಿ ಪತ್ರಕರ್ತೆಯನ್ನು ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು

ಪುಲಿಟ್ಜರ್ ಪ್ರಶಸ್ತಿ ವಿಜೇತ ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂ ಅಮೆರಿಕಕ್ಕೆ ತೆರಳದಂತೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಡೆದಿದ್ದಾರೆ.

ನವದೆಹಲಿ: ಪುಲಿಟ್ಜರ್ ಪ್ರಶಸ್ತಿ ವಿಜೇತ ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂ ಅಮೆರಿಕಕ್ಕೆ ತೆರಳದಂತೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಡೆದಿದ್ದಾರೆ.

ಮಾನ್ಯತೆಗೊಂಡ ವೀಸಾ ಮತ್ತು ಟಿಕೆಟ್ ಹೊಂದಿದ್ದರೂ ಅಮೆರಿಕಕ್ಕೆ ತೆರಳದಂತೆ ಅಧಿಕಾರಿಗಳು ತಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕ ಕುರಿತು ರಾಯಿಟರ್ಸ್ ನಲ್ಲಿನ 28 ವರ್ಷದ ಫೋಟೋ ಜರ್ನಲಿಸ್ಟ್ ಸೋಮವಾರ ಪುಲಿಟ್ಜರ್ ಪ್ರಶಸ್ತಿ ಪಡೆಯಲು ನ್ಯೂಯಾರ್ಕ್‌ ಗೆ ತೆರಳಲು ನಿರ್ಧರಿಸಿದ್ದರು. 

'ನ್ಯೂಯಾರ್ಕ್‌ನಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ಸ್ವೀಕರಿಸಲು ಹೊರಟಿದ್ದೆ ಆದರೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಡೆದರು.  ಮಾನ್ಯವಾದ ಯುಎಸ್ ವೀಸಾ ಮತ್ತು ಟಿಕೆಟ್ ಹೊಂದಿದ್ದರೂ ಅಂತಾರಾಷ್ಟ್ರೀಯ ಪ್ರಯಾಣವನ್ನು ನಿರ್ಬಂಧಿಸಲಾಯಿತು ಎಂದು ಮಟ್ಟೂ ಮಂಗಳವಾರ ಟ್ವೀಟ್ ಮಾಡಿದ್ದಾರೆ.

ಕಳೆದ ನಾಲ್ಕು ತಿಂಗಳಲ್ಲಿ ಎರಡನೇ ಬಾರಿಗೆ ವಿದೇಶ ಪ್ರವಾಸವನ್ನು ನಿರ್ಬಂಧಿಸಲಾಗಿದೆ. ಕಾರಣವಿಲ್ಲದೆ ನನ್ನನ್ನು ವಿದೇಶಕ್ಕೆ ತೆರಳದಂತೆ ತಡೆಯಲಾಗಿದೆ.ಇದರಿಂದಾಗಿ ಜೀವನದಲ್ಲಿ ನನಗೆ ಒಮ್ಮೆ ಸಿಕ್ಕಿದ ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸದಂತಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್