ಮಹಾರಾಷ್ಟ್ರದಲ್ಲಿ ಕೋವಿಡ್-19 ಕೇಸ್ ಹೆಚ್ಚಳ; ಎಕ್ಸ್ ಬಿಬಿ ರೂಪಾಂತರಿ ಪತ್ತೆ
ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಶೇ.17.7 ರಷ್ಟು ಹೆಚ್ಚಳ ಕಂಡಿದ್ದು, ಕಳೆದ ವಾರಕ್ಕೆ ಹೋಲಿಸಿದರೆ ಗಣನೀಯ ಪ್ರಮಾಣದ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಂಕಿ-ಅಂಶಗಳ ಮೂಲಕ ತಿಳಿದುಬಂದಿದೆ.
ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಶೇ.17.7 ರಷ್ಟು ಹೆಚ್ಚಳ ಕಂಡಿದ್ದು, ಕಳೆದ ವಾರಕ್ಕೆ ಹೋಲಿಸಿದರೆ ಗಣನೀಯ ಪ್ರಮಾಣದ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಂಕಿ-ಅಂಶಗಳ ಮೂಲಕ ತಿಳಿದುಬಂದಿದೆ.
ರಾಜ್ಯದಲ್ಲಿ ಕೊರೋನಾದ ಓಮಿಕ್ರಾನ್ ನ ಉಪತಳಿ ಹೊಸ ರೂಪಾಂತರಿ ಎಕ್ಸ್ ಬಿಬಿ ಪತ್ತೆಯಾಗಿದ್ದು, ಈ ಉಪತಳಿ ಕೇರಳದಲ್ಲೂ ಈಗಾಗಲೇ ಪತ್ತೆಯಾಗಿದೆ.
ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ನ ಇತರ ಉಪತಳಿಗಳಾದ ಬಿಎ.2.3.20 ಹಾಗೂ ಬಿಕ್ಯು.1 ರೂಪಾಂತರಿಗಳೂ ಪತ್ತೆಯಾಗಿದ್ದು ದೇಶದಲ್ಲಿ ಇದೇ ಮೊದಲ ಬಾರಿಗೆ ಈ ಉಪತಳಿಗಳ ಪ್ರಕರಣಗಳು ಪತ್ತೆಯಾಗಿವೆ. ಎಕ್ಸ್ ಬಿಬಿ ಓಮಿಕ್ರಾನ್ ನ ಎರಡು ಉಪತಳಿಗಳಾದ ಬಿಜೆ.1 ಹಾಗೂ ಬಿಎ.2.75 ನ ಮರುಸಂಯೋಜಿತ ವಂಶಾವಳಿಯಾಗಿದ್ದು ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ.
ಇದನ್ನೂ ಓದಿ: ದೀಪಾವಳಿ ಹಬ್ಬದ ಸಮಯ, ಭಾರತದಲ್ಲಿ ಓಮಿಕ್ರಾನ್ ಹೊಸ ಉಪ ರೂಪಾಂತರಿ ಬಿಎಫ್.7 ಪತ್ತೆ, ನಾಗರಿಕರಿಗೆ ಎಚ್ಚರಿಕೆ
ಮಹಾರಾಷ್ಟ್ರದ ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ, ಅಕ್ಟೋಬರ್ ನ ಈ ವಾರದಲ್ಲಿ ಪ್ರಕರಣಗಳು ಏರಿಕೆಯಾಗುವ ಸಾಧ್ಯತೆ ಇದೆ. ಥಾಣೆ, ರಾಯ್ ಗಢ, ಮುಂಬೈ ಗಳಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.