ಪವನ್ ಕಲ್ಯಾಣ್ 
ದೇಶ

ವೈಎಸ್ ಆರ್ ಸಿಪಿಗೆ ಎಚ್ಚರಿಕೆ ನೀಡಲು ವೇದಿಕೆ ಮೇಲೆ ಚಪ್ಪಲಿ ತೋರಿಸಿದ ಜನಸೇನಾ ನಾಯಕ ಪವನ್ ಕಲ್ಯಾಣ್

ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿರುವ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಜನಸೇನಾ ಪಕ್ಷದ ನಾಯಕ, ನಟ ಪವನ್ ಕಲ್ಯಾಣ್, ಯಾರಾದರೂ ತಮ್ಮನ್ನು ಪ್ಯಾಕೇಜ್ ಸ್ಟಾರ್ ಎಂದು ಹೇಳಿದರೆ, ಅವರಿಗೆ ತಮ್ಮ ಚಪ್ಪಲಿಯಿಂದ ಥಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. 

ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿರುವ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಜನಸೇನಾ ಪಕ್ಷದ ನಾಯಕ, ನಟ ಪವನ್ ಕಲ್ಯಾಣ್, ಯಾರಾದರೂ ತಮ್ಮನ್ನು ಪ್ಯಾಕೇಜ್ ಸ್ಟಾರ್ ಎಂದು ಹೇಳಿದರೆ, ಅವರಿಗೆ ತಮ್ಮ ಚಪ್ಪಲಿಯಿಂದ ಥಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. 

ಮಂಗಳಗಿರಿಯಲ್ಲಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ವೇಳೆ ಪವನ್ ಕಲ್ಯಾಣ್ ವೇದಿಕೆ ಮೇಲೆ ಚಪ್ಪಲಿ ತೋರಿಸಿ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಸಿದ್ದಾರೆ.

ತಮ್ಮನ್ನು ಟಾರ್ಗೆಟ್ ಮಾಡುತ್ತಿರುವ ವೈಎಸ್ ಆರ್ ಪಿ ನಾಯಕರಿಗೆ ಪವನ್ ಕಲ್ಯಾಣ್ ಎಚ್ಚರಿಕೆ ನೀಡಿದ್ದಾರೆ, ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಆಡಳಿತ ಪಕ್ಷದ ಕೆಲವು ನಾಯಕರು ತಮ್ಮನ್ನು ಬಿಜೆಪಿ, ಟಿಡಿಪಿಯಂತಹ ಪಕ್ಷಗಳಿಂದ ಪ್ಯಾಕೇಜ್ ಪಡೆಯುವ ಪ್ಯಾಕೇಜ್ ಸ್ಟಾರ್ ಎಂದು ಹೇಳುತ್ತಿರುವುದಾಗಿ ಪವನ್ ಕಲ್ಯಾಣ್ ಆರೋಪಿಸಿದ್ದಾರೆ. 

ನೇರವಾಗಿ ತಮ್ಮನ್ನು ಎದುರಿಸುವಂತೆ ಪವನ್ ಕಲ್ಯಾಣ್ ಆಡಳಿತಪಕ್ಷದ ನಾಯಕರಿಗೆ ಸವಾಲು ಹಾಕಿದ್ದು, ಆಧಾರ ರಹಿತ ಆರೋಪಗಳು ತಮ್ಮ ವಿರುದ್ಧ ಕೇಳಿಬಂದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ