ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ 
ದೇಶ

5ಜಿ ಸೇವೆ ಶಿಕ್ಷಣ ವ್ಯವಸ್ಥೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಿದೆ: ಪ್ರಧಾನಿ ಮೋದಿ

ದೇಶದಲ್ಲಿ ಆರಂಭಿಸಲಾಗಿರುವ 5ಜಿ ಟೆಲಿಕಾಂ ಸೇವೆಯು ದೇಶದ ಶಿಕ್ಷಣ ವ್ಯವಸ್ಥೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅದಾಲಾಜ್(ಗುಜರಾತ್): ದೇಶದಲ್ಲಿ ಆರಂಭಿಸಲಾಗಿರುವ 5ಜಿ ಟೆಲಿಕಾಂ ಸೇವೆಯು ದೇಶದ ಶಿಕ್ಷಣ ವ್ಯವಸ್ಥೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗಾಂಧಿನಗರ ಜಿಲ್ಲೆಯ ಅದಾಲಾಜ್ ಪಟ್ಟಣದಲ್ಲಿ ಗುಜರಾತ್ ಸರ್ಕಾರದ 'ಮಿಷನ್ ಸ್ಕೂಲ್ ಆಫ್ ಎಕ್ಸಲೆನ್ಸ್' ಉಪಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, ಇಂಗ್ಲಿಷ್ ಜ್ಞಾನವನ್ನು ಬೌದ್ಧಿಕ ಅಸ್ತಿತ್ವದ ಸಂಕೇತವೆಂದು ಪರಿಗಣಿಸಲಾಗಿದೆ. ಆದರೆ ಇಂಗ್ಲಿಷ್ ಭಾಷೆ ಕೇವಲ ಸಂವಹನ ಮಾಧ್ಯಮವಾಗಿದೆ ಎಂದರು.

5G ಸೇವೆಯು ಸ್ಮಾರ್ಟ್ ಸೌಲಭ್ಯಗಳು, ಸ್ಮಾರ್ಟ್ ತರಗತಿಗಳು ಮತ್ತು ಸ್ಮಾರ್ಟ್ ಕಲಿಕೆಯನ್ನು ಮೀರಿ ಹೋಗಲಿದೆ. ಇದು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುತ್ತದೆ ಎಂದು ಮೋದಿ ಹೇಳಿದರು.

ಇಂಗ್ಲಿಷ್ ಭಾಷೆಯು ಸಂವಹನದ ಏಕೈಕ ಮಾಧ್ಯಮವಾಗಿದ್ದರೂ ಇಂಗ್ಲಿಷ್ ಜ್ಞಾನವನ್ನು ಬೌದ್ಧಿಕತೆಯ ಸಂಕೇತವೆಂದು ಪರಿಗಣಿಸಲಾಗಿದೆ. ಇಂಗ್ಲಿಷ್‌ನಿಂದ ಅನಾನುಕೂಲವಾಗಿರುವ ಜನರು ಹಿಂದುಳಿದಿಲ್ಲ ಎಂದು ಸ್ಥಳೀಯ ಭಾಷೆಗಳ ಬಳಕೆಯನ್ನು ಅವರು ಪ್ರತಿಪಾದಿಸಿದರು. 

ಹಳ್ಳಿಗಳ ಅನೇಕ ಯುವ ಪ್ರತಿಭೆಗಳು ಇಂಗ್ಲಿಷ್‌ ಭಾಷೆಯ ತೊಡಕಿನಿಂದಾಗಿ ವೈದ್ಯರು ಮತ್ತು ಎಂಜಿನಿಯರ್‌ ಆಗಲು ಸಾಧ್ಯವಾಗಿಲ್ಲ ಎಂದರು. ಹೊಸ ಶಿಕ್ಷಣ ನೀತಿಯು(ಎನ್‌ಇಪಿ) ದೇಶವನ್ನು ಇಂಗ್ಲಿಷ್ ಭಾಷೆಯನ್ನು ಸುತ್ತುವರೆದಿರುವ 'ಗುಲಾಮ ಮನಸ್ಥಿತಿ'ಯಿಂದ ಹೊರತರಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!