ದೇಶ

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಉತ್ತರ ಪ್ರದೇಶದ ಎಲ್ಲಾ ಮತಗಳನ್ನು ಅಸಿಂಧು ಎಂದು ಪರಿಗಣಿಸಿ; ಶಶಿ ತರೂರ್ ತಂಡ ಒತ್ತಾಯ

Sumana Upadhyaya

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿರುವ ಮಧ್ಯೆ, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿ ಶಶಿ ತರೂರ್ ಅವರ ತಂಡವು ಪಕ್ಷದ ಮುಖ್ಯ ಚುನಾವಣಾ ಪ್ರಾಧಿಕಾರಕ್ಕೆ ಪತ್ರ ಬರೆದು ಗಂಭೀರ ಆರೋಪ ಮಾಡಿದೆ. 

ಉತ್ತರ ಪ್ರದೇಶದ ಕಾಂಗ್ರೆಸ್ ಚುನಾವಣೆಯಲ್ಲಿ ಗಂಭೀರ ಅಕ್ರಮಗಳು ನಡೆದಿವೆ. ರಾಜ್ಯದ ಎಲ್ಲಾ ಮತಗಳನ್ನು ಅಸಿಂಧು ಎಂದು ಪರಿಗಣಿಸುವಂತೆ ಒತ್ತಾಯಿಸಿದೆ.ಶಶಿ ತರೂರ್ ಅವರ ಪ್ರಚಾರ ತಂಡವು ಪಂಜಾಬ್ ಮತ್ತು ತೆಲಂಗಾಣದಲ್ಲಿ ಚುನಾವಣೆಯ ನಿರ್ವಹಣೆಯಲ್ಲಿ  ಗಂಭೀರ ವಿಚಾರಗಳನ್ನು ಎತ್ತಿದೆ.

ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರಿಗೆ ಬರೆದ ಪತ್ರದಲ್ಲಿ ತರೂರ್ ಅವರ ಮುಖ್ಯ ಚುನಾವಣಾ ಏಜೆಂಟ್ ಸಲ್ಮಾನ್ ಸೋಜ್ ಅವರು ಉತ್ತರ ಪ್ರದೇಶದ ಚುನಾವಣಾ ಪ್ರಕ್ರಿಯೆಯು "ವಿಶ್ವಾಸಾರ್ಹತೆ ಮತ್ತು ಸಮಗ್ರತೆಯನ್ನು ಹೊಂದಿಲ್ಲ" ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಂಡುಬಂದಿರುವುದು ನಿಮ್ಮ ಕಚೇರಿಯ ಅಧಿಕಾರಕ್ಕೆ ಬಹಿರಂಗ ಸವಾಲು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸಲು ಕಾಂಗ್ರೆಸ್ ಅಧ್ಯಕ್ಷರು ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಆದೇಶಗಳಿಗೆ ಧಿಕ್ಕಾರ ಎಂದು ಸೋಜ್ ಮಿಸ್ತ್ರಿಗೆ ಹೇಳಿದ್ದಾರೆ. 

ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಬಲಿಗರು ಉತ್ತರ ಪ್ರದೇಶದಲ್ಲಿ ಚುನಾವಣಾ ಅವ್ಯವಹಾರ ನಡೆಸುತ್ತಿದ್ದಾರೆ ಎಂಬುದಕ್ಕೆ ನಮ್ಮ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ಸೋಜ್ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. 

ಉತ್ತರ ಪ್ರದೇಶದ ಎಲ್ಲಾ ಮತಗಳನ್ನು ಅಮಾನ್ಯವೆಂದು ಪರಿಗಣಿಸಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಅಕ್ಟೋಬರ್ 18 ರ ಪತ್ರದಲ್ಲಿ ತಿಳಿಸಲಾಗಿದೆ.  ಈ ಚುನಾವಣೆಯಲ್ಲಿ ‘ಮತದಾರ ವಂಚನೆ’ ನಡೆದಿರುವ ಶಂಕೆ ವ್ಯಕ್ತಪಡಿಸಿರುವ ತರೂರ್ ತಂಡ, ಮತದಾನದ ದಿನದಂದು ಲಕ್ನೋ ಪ್ರದೇಶದಲ್ಲಿ ಹಾಜರಿರದ ಪ್ರತಿನಿಧಿಗಳು ಮತ ಚಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ. 

SCROLL FOR NEXT