ಖರ್ಗೆ ಮತ್ತು ಶಶಿ ತರೂರ್ 
ದೇಶ

ಕುತೂಹಲ ಘಟ್ಟ ತಲುಪಿದ ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಮತ ಎಣಿಕೆ ಆರಂಭ; ಖರ್ಗೆಗೆ ಒಲಿಯುತ್ತಾಳಾ ವಿಜಯಲಕ್ಷ್ಮಿ!

ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. ಅದರೊಂದಿಗೆ 137 ವರ್ಷದ ಇತಿಹಾಸವಿರುವ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷಕ್ಕೆ 24 ವರ್ಷಗಳ ನಂತರ ಗಾಂಧಿಯೇತರ ಅಧ್ಯಕ್ಷರೊಬ್ಬರು ಲಭಿಸಲಿದ್ದಾರೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. ಅದರೊಂದಿಗೆ 137 ವರ್ಷದ ಇತಿಹಾಸವಿರುವ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷಕ್ಕೆ 24 ವರ್ಷಗಳ ನಂತರ ಗಾಂಧಿಯೇತರ ಅಧ್ಯಕ್ಷರೊಬ್ಬರು ಲಭಿಸಲಿದ್ದಾರೆ.

ಅವರು ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆಯೋ ಅಥವಾ ಕೇರಳದ ಶಶಿ ತರೂರ್‌ ಅವರೋ ಎಂಬುದು ಮತ ಎಣಿಕೆಯ ನಂತರ ತಿಳಿಯಲಿದೆ.

ದೇಶಾದ್ಯಂತ ಸ್ಥಾಪಿಸಲಾಗಿದ್ದ 68 ಮತಗಟ್ಟೆಗಳಿಂದ ಮತ ಪೆಟ್ಟಿಗೆಗಳನ್ನು ದೆಹಲಿಗೆ ತರುವ ಕಾರ್ಯ ಮಂಗಳವಾರ ಸಂಜೆಗೆ ಪೂರ್ಣಗೊಂಡಿದೆ. ಬೆಳಗ್ಗೆ 10 ಗಂಟೆಯಿಂದ ಮತಎಣಿಕೆ ಕಾರ್ಯ ಆರಂಭವಾಗಿದೆ.

ಗಾಂಧಿ ಕುಟುಂಬಕ್ಕೆ ಹತ್ತಿರುವಿರುವ ಹಾಗೂ ಪಕ್ಷದಲ್ಲಿ ಹೆಚ್ಚು ಬೆಂಬಲ ಹೊಂದಿರುವ ಖರ್ಗೆ ಅವರೇ ಜಯ ಗಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿ ಚುನಾವಣೆ ನಡೆದಿದೆ. ಹಾಗೆಯೇ 22 ವರ್ಷಗಳ ಬಳಿಕ ನೆಹರೂ-ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ಸಿಗಲಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಶೇ 96ರಷ್ಟು ಮತದಾನವಾಗಿತ್ತು. 9,915 ಪ್ರತಿನಿಧಿಗಳ ಪೈಕಿ 9,500 ಪ್ರತಿನಿಧಿಗಳು ತಮ್ಮ ಹಕ್ಕು ಚಲಾಯಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್