ದೇಶ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದಕ್ಕಾಗಿ ವಿಧಿಸುತ್ತಿದ್ದ 500 ರೂ. ದಂಡ ನಿಯಮ ಹಿಂಪಡೆದ ದೆಹಲಿ ಸರ್ಕಾರ

Ramyashree GN

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇನ್ಮುಂದೆ ಮಾಸ್ಕ್‌ ಧರಿಸದ ಜನರಿಗೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ ಎಂದು ದೆಹಲಿ ಸರ್ಕಾರ ಗುರುವಾರ ಪ್ರಕಟಿಸಿದೆ.

ದೆಹಲಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದ ಮತ್ತು ಆದೇಶವನ್ನು ಉಲ್ಲಂಘಿಸಿದವರಿಗೆ ₹ 500 ದಂಡ ವಿಧಿಸುವ ಆದೇಶವನ್ನು ಹಿಂಪಡೆಯಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ನಿರ್ಧರಿಸಿದೆ.  ಆದಾಗ್ಯೂ, ಜನನಿಬಿಡ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಮುಂದುವರಿಸಲು ಸರ್ಕಾರವು ಸಾರ್ವಜನಿಕರಿಗೆ ಸಲಹೆ ನೀಡಿದೆ.

'ಸಾಂಕ್ರಾಮಿಕ ಕಾಯ್ದೆಯಡಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದನ್ನು ಸೆಪ್ಟೆಂಬರ್ 30ರ ನಂತರ ವಿಸ್ತರಿಸಲಾಗುವುದಿಲ್ಲ. ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದಕ್ಕಾಗಿ ವಿಧಿಸಲಾಗುತ್ತಿದ್ದ 500 ರೂ. ದಂಡವನ್ನು ಹಿಂತೆಗೆದುಕೊಳ್ಳಲಾಗುತ್ತದೆ. ಆದರೆ, ಕಿಕ್ಕಿರಿದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಎಲ್ಲಾ ನಾಗರಿಕರಿಗೆ ಸೂಚಿಸಲಾಗಿದೆ' ಎಂದು ದೆಹಲಿ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.

ಸೆಪ್ಟೆಂಬರ್ 22 ರಂದು ನಡೆದ ಸಭೆಯಲ್ಲಿ, ಕೋವಿಡ್-19 ದೈನಂದಿನ ಪಾಸಿಟಿವಿಟಿ ದರ ಗಣನೀಯವಾಗಿ ಕಡಿಮೆಯಾಗಿದ್ದು, ಹೆಚ್ಚಿನ ಜನರಿಗೆ ಕೋವಿಡ್ ವಿರುದ್ಧದ ಲಸಿಕೆ ನೀಡಲಾಗಿದೆ. ಹೀಗಾಗಿ ನಗರದಲ್ಲಿ ಮಾಸ್ಕ್ ಧರಿಸದಿದ್ದಕ್ಕಾಗಿ ವಿಧಿಸುತ್ತಿದ್ದ ₹ 500 ದಂಡವನ್ನು ತೆಗೆದುಹಾಕಲು ಡಿಡಿಎಂಎ ನಿರ್ಧರಿಸಿತ್ತು.

ಮಾಸ್ಕ್‌ಗಳನ್ನು ಧರಿಸುವುದು ಉಪಯುಕ್ತವಾಗಿದ್ದರೂ, ಸಾಂಕ್ರಾಮಿಕ ಕಾಯ್ದೆಯಡಿಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ಆದೇಶವನ್ನು ಸೆಪ್ಟೆಂಬರ್ 30ರ ನಂತರ ವಿಸ್ತರಿಸಲಾಗುವುದಿಲ್ಲ ಎಂದು ಸರ್ವಾನುಮತದಿಂದ ಒಪ್ಪಿಕೊಳ್ಳಲಾಯಿತು. ಆದ್ದರಿಂದ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ವಿಧಿಸುತ್ತಿದ್ದ ₹ 500 ದಂಡವನ್ನು ಹಿಂತೆಗೆದುಕೊಳ್ಳಲಾಗಿದೆ.

SCROLL FOR NEXT