ಸಾಂದರ್ಭಿಕ ಚಿತ್ರ 
ದೇಶ

ಕೇದಾರನಾಥ್ ಗೆ ಹೆಲಿಕಾಪ್ಟರ್ ಸೇವೆ ಪುನರ್ ಆರಂಭ

ಹೆಲಿಕಾಪ್ಟರ್ ದುರಂತ ಸಂಭವಿಸಿದ ಎರಡು ದಿನಗಳ ಬಳಿಕ ಉತ್ತರಾಖಂಡ್ ನ ಪ್ರಸಿದ್ಧ ಯಾತ್ರಾ ಸ್ಥಳ ಕೇದಾರನಾಥ್ ದೇವಾಲಯಕ್ಕೆ ಹೆಲಿಕಾಪ್ಟರ್ ಸೇವೆ ಪುನರ್ ಆರಂಭವಾಗಿದೆ. ಮಂಗಳವಾರ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಪೈಲಟ್ ಹಾಗೂ ಆರು ಮಂದಿ ಭಕ್ತರು ಸಾವನ್ನಪ್ಪಿದ್ದರು.  

ಡೆಹ್ರಾಡೂನ್: ಹೆಲಿಕಾಪ್ಟರ್ ದುರಂತ ಸಂಭವಿಸಿದ ಎರಡು ದಿನಗಳ ಬಳಿಕ ಉತ್ತರಾಖಂಡ್ ನ ಪ್ರಸಿದ್ಧ ಯಾತ್ರಾ ಸ್ಥಳ ಕೇದಾರನಾಥ್ ದೇವಾಲಯಕ್ಕೆ ಹೆಲಿಕಾಪ್ಟರ್ ಸೇವೆ ಪುನರ್ ಆರಂಭವಾಗಿದೆ. ಮಂಗಳವಾರ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಪೈಲಟ್ ಹಾಗೂ ಆರು ಮಂದಿ ಭಕ್ತರು ಸಾವನ್ನಪ್ಪಿದ್ದರು.  

ಬುಧವಾರ ವಿವಿಧ ವಿಮಾನಯಾನ ಕಂಪನಿಗಳು ಹೆಲಿಕಾಪ್ಟರ್ ಸೇವೆಯನ್ನು ಪುನರ್ ಆರಂಭಿಸಿದ್ದು, 981 ಭಕ್ತರನ್ನು ಕೇದಾರನಾಥ್ ಗೆ ಕರೆದೊಯ್ಯಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅರ್ಯನ್ ವಿಮಾನಯಾನ ಕಂಪನಿ ಮಸ್ತ- ಗುಪ್ತ್ ಕಾಶಿಯಿಂದ ಕೇದಾರನಾಥ್ ಗೆ ಸೇವೆಯನ್ನು ಪುನರ್ ಆರಂಭಿಸಿದೆ.

ನಾಗರಿಕ ವಿಮಾನಯಾನ ನಿರ್ದೇಶನಾಲಯದ ತಂಡವೊಂದು  ಮಸ್ತ ಹೆಲಿಪ್ಯಾಡ್ ನಲ್ಲಿ ಪರಿಶೀಲನೆ ನಡೆಸಿದ ನಂತರ ಹೆಲಿಕಾಪ್ಟರ್ ಸೇವೆಯನ್ನು ಪುನರ್ ಆರಂಭಿಸಲಾಯಿತು ಎಂದು ಆರ್ಯನ್ ವಿಮಾನಯಾನದ ಅಧಿಕಾರಿ ಗುರುವಾರ  ತಿಳಿಸಿದ್ದಾರೆ. ಪ್ರಸ್ತುತ ಕೇದಾರನಾಥ್ ಗೆ ಎಂಟು ಕಂಪನಿಗಳು ಹೆಲಿಕಾಪ್ಟರ್ ಸೇವೆಯನ್ನು ಒದಗಿಸುತ್ತಿವೆ.

ಈ ವರ್ಷದ ಮೇ ತಿಂಗಳಿನಿಂದ ಕೇದಾರನಾಥ ದೇವಾಲಯದ ಬಾಗಿಲು ತೆರೆದ ನಂತರ 1,44,832 ಯಾತ್ರಾರ್ಥಿಗಳು ಹೆಲಿಕಾಪ್ಟರ್ ಮೂಲಕ ದೇವಾಲಯಕ್ಕೆ ಪ್ರಯಾಣಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ದೇವಾಲಯಕ್ಕೆ ತೆರಳಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT