ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್: 26 ವರ್ಷದ ಟೆಕ್ಕಿ ಮೇಲೆ 10 ಜನರಿಂದ ಅತ್ಯಾಚಾರ, ಗೆಳೆಯನಿಗೆ ಥಳಿತ

ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ 26 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಸುಮಾರು 10 ಮಂದಿ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ರಾಂಚಿ: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ 26 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಸುಮಾರು 10 ಮಂದಿ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮನೆಯಿಂದ ಕೆಲಸ ಮಾಡುತ್ತಿರುವುದರಿಂದ ಇಲ್ಲಿಗೆ ಬಂದಿದ್ದ ಮಹಿಳೆ ಗುರುವಾರ ಸಂಜೆ ದ್ವಿಚಕ್ರ ವಾಹನದಲ್ಲಿ ತನ್ನ ಗೆಳೆಯನೊಂದಿಗೆ ಹೊರಟಿದ್ದಾಗ ಚೈಬಾಸಾದ ಹಳೆಯ ಏರೋಡ್ರೋಮ್ ಬಳಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಎಂಟರಿಂದ ಹತ್ತು ಜನರ ಪುರುಷರ ಗುಂಪು ಅವರಿಬ್ಬರನ್ನು ತಡೆದು, ಗೆಳೆಯನಿಗೆ ಥಳಿಸಿದೆ. ಬಳಿಕ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಂತರ ಅತ್ಯಾಚಾರವೆಸಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಫಸಿಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಘಟನೆಯ ಹಿಂದಿರುವವರನ್ನು ಗುರುತಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ತಿಳಿಸಿದ್ದಾರೆ.

ಮಹಿಳೆ ಪ್ರಸಿದ್ಧ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆಕೆಯ ಮೇಲೆ ಅತ್ಯಾಚಾರ ಎಸಗಿದ ಬಳಿಕ ಆಕೆಯನ್ನು ಸ್ಥಳದಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಆಕೆಯ ಪರ್ಸ್ ಮತ್ತು ಮೊಬೈಲ್ ಫೋನ್ ಅನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಹೇಗೋ ಮನೆಗೆ ತಲುಪಿ, ಘಟನೆಯ ಬಗ್ಗೆ ತನ್ನ ಮನೆಯವರಿಗೆ ತಿಳಿಸಿದ್ದಾರೆ. ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಸದರ್ ಆಸ್ಪತ್ರೆಯಲ್ಲಿ ಆಕೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP