ದೇಶ

ಸಿತ್ರಾಂಗ್ ಚಂಡಮಾರುತದ ಭೀತಿ: ಪಶ್ಚಿಮ ಬಂಗಾಳ ಸರ್ಕಾರದಿಂದ ಅಗತ್ಯ ಮುಂಜಾಗ್ರತಾ ಕ್ರಮ

Nagaraja AB

ಕೊಲ್ಕತ್ತಾ: 'ಸಿತ್ರಾಂಗ್' ಚಂಡಮಾರುತದ ಸಂಭವನೀಯ ಹಾನಿ ಎದುರಿಸಲು ಪಶ್ಚಿಮ ಬಂಗಾಳ ಸರ್ಕಾರ ಜನರನ್ನು ಸ್ಥಳಾಂತರಿಸುವುದು ಮತ್ತು ಆಶ್ರಯ ತಾಣಗಳಿಗೆ ಪರಿಹಾರ ಸಾಮಗ್ರಿಗಳನ್ನು ಪೂರೈಸುವುದು ಸೇರಿದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಸಿಬ್ಬಂದಿಯೊಂದಿಗೆ ವಿಪತ್ತು ನಿರ್ವಹಣಾ ಇಲಾಖೆಯ ಹಲವು ತಂಡಗಳನ್ನು ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಯಾವುದೇ ಪ್ರವಾಸಿಗರು ಮತ್ತು ಮೀನುಗಾರರು ಸಮುದ್ರಕ್ಕೆ ಇಳಿಯಲು ಅವಕಾಶ ನೀಡುತ್ತಿಲ್ಲ.

ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯೊಂದಿಗೆ ವಿಶೇಷ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಸಿತ್ರಾಂಗ್  ಚಂಡಮಾರುತ ದಿಂದ ಭಾರೀ ಮಳೆಯಾಗಲಿದ್ದು, ಗಂಟೆಗೆ 90 ರಿಂದ 100 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ದಕ್ಷಿಣ 24 ಪರಗಣ, ಉತ್ತರ 24 ಪರಗಣ, ಮತ್ತು ಪೂರ್ವ ಮಿಡ್ನಾಪುರ ಜಿಲ್ಲೆಗಳಲ್ಲಿ ಆಲರ್ಟ್ ಘೋಷಿಸಲಾಗಿದೆ. ತುರ್ತು ಸಂದರ್ಭದಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

SCROLL FOR NEXT