ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,334 ಹೊಸ ಪ್ರಕರಣ ಪತ್ತೆ

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,334 ಹೊಸ ಪ್ರಕರಣ ಪತ್ತೆಯಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,334 ಹೊಸ ಪ್ರಕರಣ ಪತ್ತೆಯಾಗಿದೆ. 

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,44,076ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕಳೆದ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,28,977ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,193ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1557 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,40,91,906ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,61,290 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 89,99,97,806 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ  2,19,56,41,807 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT