ಕೇರಳ ವಿಶ್ವವಿದ್ಯಾನಿಲಯ ವಿವಾದ: ರಾಜ್ಯಪಾಲರ ರಾಜೀನಾಮೆ ಸೂಚನೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಉಪಕುಲಪತಿಗಳು
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ರಾಜೀನಾಮೆ ಸೂಚನೆಯನ್ನು ಪ್ರಶ್ನಿಸಿ ಕೇರಳದ 9 ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ.
ನವದೆಹಲಿ: ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ರಾಜೀನಾಮೆ ಸೂಚನೆಯನ್ನು ಪ್ರಶ್ನಿಸಿ ಕೇರಳದ 9 ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಕುಲಪತಿಗಳ ಮನವಿ ಹಿನ್ನೆಲೆಯಲ್ಲಿ ನ್ಯಾಯಾಲಯವು ಇಂದು ಸಂಜೆ 4 ಗಂಟೆಗೆ ಅರ್ಜಿ ಪರಿಗಣನೆ ಕುರಿತು ಆದೇಶ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕೇರಳ: ತಾರಕಕ್ಕೇರಿದ ರಾಜ್ಯಪಾಲ-ಸರ್ಕಾರದ ನಡುವಿನ ತಿಕ್ಕಾಟ, 9 ವಿವಿಗಳ ಉಪಕುಲಪತಿಗಳ ರಾಜೀನಾಮೆ ಕೇಳಿದ ಆರೀಫ್ ಖಾನ್
ಈ ನಡುವೆ, ಕೇರಳದ ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳ ರಾಜೀನಾಮೆಗೆ ಆದೇಶ ನೀಡಿದ ರಾಜ್ಯಪಾಲ ಆರಿಫ್ ಎಂ ಖಾನ್ ವಿರುದ್ಧ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಪಾಲರು (ಆರಿಫ್ ಎಂ ಖಾನ್) ಕುಲಪತಿ ಹುದ್ದೆಯನ್ನು ದುರುಪಯೋಗ ಪಡಿಸಿಕೊಂಡು ತಮ್ಮ ಅಧಿಕಾರಕ್ಕಿಂತ ಹೆಚ್ಚಿನ ಅಧಿಕಾರವನ್ನು ಚಲಾಯಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಮತ್ತು ಕುಲಪತಿಗಳ ಅಧಿಕಾರದ ಮೇಲಿನ ಅತಿಕ್ರಮಣವಾಗಿದೆ. ಗವರ್ನರ್ ಹುದ್ದೆಯು ಸರ್ಕಾರದ ವಿರುದ್ಧ ನಡೆಯುವುದಾಗಬಾರದು. ಸರ್ಕಾರವನ್ನು ಎತ್ತಿ ಹಿಡಿಯಬೇಕು. ರಾಜ್ಯಪಾಲರು ಆರ್‌ಎಸ್‌ಎಸ್‌ನ ಗೊಂಬೆಯಂತೆ ಕಾರ್ಯನಿರ್ವಹಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಅಜ್ಞಾನಿ ಆಡಳಿತಗಾರರಿಂದ ಪ್ರತಿಭಾನ್ವಿತ ಕೇರಳಿಗರು ರಾಜ್ಯ ತೊರಿಯುತ್ತಿದ್ದಾರೆ: ಸರ್ಕಾರಕ್ಕೆ ಆರಿಫ್ ಖಾನ್ ತಿರುಗೇಟು
ಇತ್ತೀಚೆಗೆ ಸುಪ್ರೀಂ ಕೋರ್ಟ್, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿವಿಯ ಉಪಕುಲಪತಿ ನೇಮಕವನ್ನು ಯುಜಿಸಿ ನಿಯಮಗಳಿಗೆ ವಿರುದ್ಧವಾಗಿದೆ ಎಂದು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ರಾಜ್ಯಪಾಲರು 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ.
ವಿವಿಗಳ ಕುಲಪತಿಗಳೂ ಆಗಿರುವ ರಾಜ್ಯಪಾಲರು ಸೋಮವಾರ ಬೆಳಿಗ್ಗೆ 11.30 ರ ವೇಳೆಗೆ ಉಪಕುಲಪತಿಗಳ ರಾಜೀನಾಮೆ ತಮಗೆ ತಲುಪಬೇಕು ಎಂದೂ ನಿರ್ದೇಶನ ನೀಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.