ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ 
ದೇಶ

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಎನ್ಐಎ ತನಿಖೆಗೆ ಬಿಜೆಪಿ ಒತ್ತಾಯ

ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಆತ್ಮಾಹುತಿಗಳ ದಾಳಿ ಎಂಬುದನ್ನು ರಾಜ್ಯ ಪೊಲೀಸರು ಒಪ್ಪಿಕೊಳ್ಳಬೇಕೆಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಮಂಗಳವಾರ ಹೇಳಿದ್ದಾರೆ.

ಕೊಯಮತ್ತೊರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಆತ್ಮಾಹುತಿಗಳ ದಾಳಿ ಎಂಬುದನ್ನು ರಾಜ್ಯ ಪೊಲೀಸರು ಒಪ್ಪಿಕೊಳ್ಳಬೇಕೆಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಮಂಗಳವಾರ ಹೇಳಿದ್ದಾರೆ. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ  ವರ್ಗಾಯಿಸುವಂತೆ ಕೋರಿ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದೀಪಾವಳಿಗೂ ಒಂದು ದಿನ ಮುಂಚಿತವಾಗಿ ಕೊಯಮತ್ತೂರಿಲ್ಲಿ ಕಾರು ಸ್ಫೋಟ ಸಂಭವಿಸಿದೆ. ಎನ್ ಐಎ ದಾಳಿ ಮತ್ತು ಬಂಧನದಿಂದ ಕೊಯಮತ್ತೂರು ಉಗ್ರರ ಚಟುವಟಿಕೆ ತಾಣ ಎಂಬುದು ತಿಳಿದುಬಂದಿದೆ. ಸ್ಫೋಟದಲ್ಲಿ ಮೃತಪಟ್ಟ ವ್ಯಕ್ತಿಯ ಮನೆಯಿಂದ  50 ಕೆಜಿ ಅಮೋನಿಯಂ ನೈಟ್ರೈಟ್, ಪೊಟಾಶಿಯಂ, ಸೊಡಿಯಂ, ಪ್ಯೂಸ್ ವೈರ್, ಏಳು- ವೋಲ್ಟ್ ಬ್ಯಾಟರಿಯನ್ನು ಪೊಲೀಸರು ವಸಕ್ಕೆ ಪಡೆದಿದ್ದಾರೆ. ಆದರೆ, ಈವರೆಗೂ ಮಾಹಿತಿಯನ್ನು ಬಹಿರಂಗಪಡಿಸಿಲ್ಲ ಎಂದರು.

 ಕೊಯಮತ್ತೂರಿನ ಪ್ರಸಿದ್ದ ಸಂಗಮೇಶ್ವರ ದೇವಾಲಯದ ಬಳಿ ಭಾನುವಾರ ಬೆಳಗ್ಗೆ ಕಾರು ಸ್ಫೋಟ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟ ನಂತರ ಐವರನ್ನು ನಗರ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT