ದೇಶ

ಅರುಣಾಚಲ ಪ್ರದೇಶದ ಹಳೇ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ: 700ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

Manjula VN

ಗುವಾಹಟಿ: ಅರುಣಾಚಲ ಪ್ರದೇಶದ ಹಳೇ ಮಾರುಕಟ್ಟೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 700 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ.

ರಾಜ್ಯದ ರಾಜಧಾನಿ ಇಟಾನಗರ ಸಮೀಪದ ನಹರ್ಲಗುನ್ ನಲ್ಲಿರುವ ದೈನಂದಿನ ಮಾರುಕಟ್ಟೆಯಲ್ಲಿ ಇಂದು ಬೆಳಗಿನ ಜಾವ 4.30ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

ನಹರ್ಲಗುಂನಲ್ಲಿ ವಾಟರ್ ಫಿಲ್ಲಿಂಗ್ ವ್ಯವಸ್ಥೆ ಇಲ್ಲದಿರುವ ಕಾರಣ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಲೇಖಿ ಐರನ್ ಫ್ಯಾಕ್ಟರಿ ಬಳಿ ತೆರಳಿ ನೀರು ತುಂಬಿಸಿಕೊಳ್ಳಬೇಕಿತ್ತು. ಅಷ್ಟರಲ್ಲಾಗಲೇ ಬೆಂಕಿಯ ಕೆನ್ನಾಲಿಗೆ ಇಡೀ ಮಾರುಕಟ್ಟೆಗೆ ಆವರಿಸಿತ್ತು.

ಬಳಿಕ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಇದೀಗ ಅಧಿಕಾರಿಗಳು ಸ್ಥಳದಲ್ಲಿ ಹತ್ತಿರ ಇರುವ ಪ್ರದೇಶದಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದಾರೆ.

SCROLL FOR NEXT