ರಾಮ ಮಂದಿರದ ಮಾದರಿ 
ದೇಶ

ಜನವರಿ 2024 ರಲ್ಲಿ ರಾಮ ಮಂದಿರ ಭಕ್ತರ ದರ್ಶನಕ್ಕೆ ಮುಕ್ತ: ಟ್ರಸ್ಟ್ ಸದಸ್ಯ

ಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ 2024 ರ ಜನವರಿಯಲ್ಲಿ ಮಂದಿರವನ್ನು ಭಕ್ತರ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದು ದೇಗುಲ...

ಅಯೋಧ್ಯ: ಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ 2024 ರ ಜನವರಿಯಲ್ಲಿ ಮಂದಿರವನ್ನು ಭಕ್ತರ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದು ದೇಗುಲ ನಿರ್ಮಾಣದ ಮೇಲ್ವಿಚಾರಣೆಗಾಗಿ ಸ್ಥಾಪಿಸಲಾದ ಟ್ರಸ್ಟ್‌ನ ಸದಸ್ಯರು ತಿಳಿಸಿದ್ದಾರೆ.

ಶೇ. 50 ರಷ್ಟು ದೇವಾಲಯದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಮತ್ತು ಒಟ್ಟಾರೆ ಪ್ರಗತಿ ತೃಪ್ತಿಕರವಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಮಂಗಳವಾರ ತಿಳಿಸಿದೆ.

2024ರ ಜನವರಿಯಲ್ಲಿ ಮಕರ ಸಂಕ್ರಾಂತಿಯಂದು ದೇಗುಲದ ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ ದೇವಾಲಯವನ್ನು ಭಕ್ತರಿಗೆ ಮುಕ್ತಗೊಳಿಸಲಾಗುವುದು ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ದಾರೆ.

ಮುಂದಿನ ವರ್ಷ ಡಿಸೆಂಬರ್‌ ವೇಳೆಗೆ ದೇಗುಲದ ನೆಲ ಮಹಡಿ ಸಿದ್ಧಗೊಳ್ಳಲಿದ್ದು, 2024ರ ಜನವರಿ 14ರ ಸುಮಾರಿಗೆ ರಾಮನ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗುವುದು ಎಂದರು.

ರಾಮ ಮಂದಿರ ನಿರ್ಮಾಣಕ್ಕೆ ಅಂದಾಜು 1,800 ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು ಎಂದು ರೈ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT