ವಿಪಿನ್ ನೈಹಾರಿ 
ದೇಶ

ಹಿಮಾಚಲ ಚುನಾವಣೆ: ಬಿಜೆಪಿ ತೊರೆದ ಇಬ್ಬರು ನಾಯಕರು, ಧರ್ಮಶಾಲಾದಿಂದ ಪಕ್ಷೇತರರಾಗಿ ಸ್ಪರ್ಧೆ

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿಯ ಇಬ್ಬರು ಹಿರಿಯ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿ ಮಂಗಳವಾರ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಧರ್ಮಶಾಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿಯ ಇಬ್ಬರು ಹಿರಿಯ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿ ಮಂಗಳವಾರ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಪಕ್ಷದ ಎಸ್ಟಿ ಮೋರ್ಚಾ ಉಪಾಧ್ಯಕ್ಷ ವಿಪಿನ್ ನೈಹಾರಿ ಮತ್ತು ಬಿಜೆಪಿ ಜಿಲ್ಲಾ ಅಧ್ಯಕ್ಷ ಅನಿಲ್ ಚೌಧರಿ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಪಕ್ಷ ಒಬಿಸಿ ನಾಯಕ ರಾಕೇಶ್ ಚೌಧರಿ ಮತ್ತು ಹಾಲಿ ಶಾಸಕ ವಿಶಾಲ್ ನೈಹಾರಿ ಅವರಿಗೆ ಟಿಕೆಟ್ ನೀಡಿದೆ.

ಟಿಕೆಟ್ ವಂಚಿತ ಇಬ್ಬರು ನಾಯಕರೂ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ.

ಅನಿಲ್ ಚೌಧರಿ ಅವರಿಗೆ ಪಕ್ಷದ ಟಿಕೆಟ್‌ ನೀಡುವಂತೆ ಒತ್ತಾಯಿಸಿ ಬಿಜೆಪಿ ಧರ್ಮಶಾಲಾ ಮಂಡಲದ ಎಲ್ಲಾ ಪದಾಧಿಕಾರಿಗಳು ಪ್ರತಿಭಟನೆ ಮಾಡಿದ್ದಾರೆ ಎಂದು ಗಡ್ಡಿ ಸಮುದಾಯದ ಮುಖಂಡ ವಿಪಿನ್ ನೈಹಾರಿಯಾ ಅವರು ತಿಳಿಸಿದ್ದಾರೆ. 

ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 29 ಕೊನೆಯ ದಿನವಾಗಿದೆ.

 ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!