ದೇಶ

ಹಿಜಾಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ: ಓವೈಸಿ

Manjula VN

ನವದೆಹಲಿ: ಹಿಜಾಬ್ ಧರಿಸಿರುವ ಮಹಿಳೆಯನ್ನು ಭಾರತದ ಪ್ರಧಾನಮಂತ್ರಿಯಾಗಿ ನೋಡಲು ಬಯಸುತ್ತೇನೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ ಅವರು ಮಂಗಳವಾರ ಹೇಳಿದ್ದಾರೆ.

ಓವೈಸಿ ಮಾತನಾಡಿರುವ ವಿಡಿಯೋವನ್ನು ಎಎನ್ಐ ಸುದ್ದಿಸಂಸ್ಥೆ ಹಂಚಿಕೊಂಡಿದ್ದು, ವಿಡಿಯೋದಲ್ಲಿ ‘ಮುಸ್ಲಿಂ ಅಸ್ಮಿತೆಗೆ ಬಿಜೆಪಿ ವಿರುದ್ಧವಾಗಿದೆ. ಭಾರತದ ವೈವಿಧ್ಯತೆಯನ್ನು ಕೊನೆಗೊಳಿಸುವುದು ಬಿಜೆಪಿಯ ನಿಜವಾದ ಅಜೆಂಡಾ ಎಂದು ಹೇಳಿರುವುದು ಕಂಡು ಬಂದಿದೆ. 

ಬಿಜೆಪಿ ನಾಯಕರು ಹಲಾಲ್ ಮಾಂಸದ ಬಗ್ಗೆ ಕೆಟ್ಟ ಅಭಿಪ್ರಾಯವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ, ಆದರೆ ಬಿಜೆಪಿಯೂ ಹಲಾಲ್ ಕಮಿಷನ್ ಪಡೆಯುತ್ತಿದೆ. ಅವರ ನಾಯಕರು ಹಲಾಲ್ ಕಮಿಷನ್ ಸ್ವೀಕರಿಸಿದ್ದಾರೆ ಎಂಬುದಕ್ಕೆ ನನ್ನ ಬಳಿ ಸಾಕಷ್ಟು ವಿಡಿಯೋ ಸಾಕ್ಷಿಗಳಿವೆ ಎಂದು ಆರೋಪಿಸಿದ್ದಾರೆ. 

“ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಘೋಷಣೆ ಕೇವಲ ಅವರ ಭಾಷಣಗಳಿಗೆ ಸೀಮಿತವಾಗಿದೆ. ಬಿಜೆಪಿ ಮುಸ್ಲಿಂ ವಿರೋಧಿ ಪಕ್ಷ. ಬಿಜೆಪಿ ಆಡಳಿತದಲ್ಲಿ ಮುಸ್ಲಿಂರ ಗಡ್ಡ, ಊಟ, ಟೋಪಿಗೆಗೆ ತೊಂದರೆ ಇದೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ರಾಜ್ಯ ಸರ್ಕಾರಗಳು ಮದರಸಾಗಳ ಸಮೀಕ್ಷೆಗೆ ಮುಂದಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ‘ಕೇವಲ ಒಂದು ಧರ್ಮ, ಸಮುದಾಯಕ್ಕೆ ಸೇರಿದ ಮದರಸಾಗಳ ಸರ್ವೆ ಮಾಡುವ ಬದಲು, ದೇಶದಾದ್ಯಂತ ಆರ್‌ಎಸ್‌ಎಸ್‌ ನಡೆಸುತ್ತಿರುವ ಶಿಶುಮಂದಿರ, ಶಾಲೆಗಳು, ಕ್ರೈಸ್ತರ ಶಾಲೆ, ಖಾಸಗಿ ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ಶಾಲೆ, ಕಾಲೇಜುಗಳ ಸ್ಥಿತಿಗತಿ ಬಗ್ಗೆಯೂ ಸಮಗ್ರ ತನಿಖೆ ನಡೆಸಲಿ’ ಎಂದು ಕಿಡಿಕಾರಿದ್ದಾರೆ.

SCROLL FOR NEXT