ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಗುಜರಾತ್ ಚುನಾವಣೆ ಹಿನ್ನೆಲೆ ಖರ್ಗೆ ನೇತೃತ್ವದಲ್ಲಿ ಚುನಾವಣೆ ಸಮಿತಿ ಸಭೆ; ಅಭ್ಯರ್ಥಿಗಳ ಪಟ್ಟಿ ಅಂತಿಮದ ಬಗ್ಗೆ ಚರ್ಚೆ

ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಕಾರ್ಯಕಾರಿ ಸಮಿತಿಗೆ ಪರ್ಯಾಯವಾಗಿ ಸಮಿತಿ ರಚಿಸಿದ್ದು, ಈ ನಡುವೆ ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯನ್ನೂ ನಡೆಸಿದ್ದಾರೆ.

ಖರ್ಗೆ ನೇತೃತ್ವದ ಸಿಇಸಿ ಸಭೆ
Srinivas Rao BV
Updated On : 27 Oct 2022, 1:51 pm

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಕಾರ್ಯಕಾರಿ ಸಮಿತಿಗೆ ಪರ್ಯಾಯವಾಗಿ ಸಮಿತಿ ರಚಿಸಿದ್ದು, ಈ ನಡುವೆ ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯನ್ನೂ ನಡೆಸಿದ್ದಾರೆ. 

ಸಭೆಯಲ್ಲಿ, ಗುಜರಾತ್ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆ ಚರ್ಚೆ ನಡೆದಿದೆ. ಸಭೆಯಲ್ಲಿ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಸಹ ಭಾಗವಹಿಸಿದ್ದರು. ಗುಜರಾತ್ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಕಾಂಗ್ರೆಸ್ ಸ್ಕ್ರೀನಿಂಗ್ ಸಮಿತಿಯ ಮೂರು ಸಭೆಗಳು ನಡೆದಿವೆ.
 
ಗುಜರಾತ್ ನಲ್ಲಿ ಬಿಜೆಪಿಯ ಸರ್ಕಾರವನ್ನು ಕಿತ್ತೊಗೆದು ಈ ಬಾರಿ ಅಧಿಕಾರಕ್ಕೇರಲು ಕಾಂಗ್ರೆಸ್ ಯತ್ನಿಸುತ್ತಿದೆ. ಆದರೆ ಈ ಬಾರಿ ಕಾಂಗ್ರೆಸ್ ಗೆ ಆಮ್ ಆದ್ಮಿ ಪಕ್ಷ ಪ್ರಬಲ ಪೈಪೋಟಿ ನೀಡುವ ಸಾಧ್ಯತೆ ಇದೆ. 

ಇದನ್ನೂ ಓದಿ: ಮುಂಬರುವ ಗುಜರಾತ್, ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನಕ್ಕೆ ಖರ್ಗೆ ಬಲಿಪಶು?: ಬಿಜೆಪಿ

Advertisement

Advertisement

1998 ರಿಂದಲೂ ಗುಜರಾತ್ ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ವರ್ಷಾಂತ್ಯದ ವೇಳೆಗೆ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments