Mallikarjun Kharge 
ದೇಶ

ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ: ಅಭಿನಂದನೆ ಸಲ್ಲಿಸಿದ ಸೋನಿಯಾ ಗಾಂಧಿ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕಾರ ಸ್ವೀಕಾರ ಮಾಡಿದರು.

ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕಾರ ಸ್ವೀಕಾರ ಮಾಡಿದರು.

ದೆಹಲಿಯಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು. 

ಅಧಿಕಾರ ಹಸ್ತಾಂತರಿಸಿದ ಬಳಿಕ ಮಾತನಾಡಿದ ಸೋನಿಯಾ ಗಾಂಧಿಯವರು, ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಬದಲಾವಣೆ ಜಗದ ನಿಯಮ... ಕಾಂಗ್ರೆಸ್ ಈ ಹಿಂದೆಯೂ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿತ್ತು. ಆದರೆ, ಆ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದ್ದಾರೆ. 

24 ವರ್ಷಗಳ ಬಳಿಕ ಗಾಂಧಿಯೇತರ ಕುಟುಂಬದ ವ್ಯಕ್ತಿಯೊಬ್ಬರು ಕಾಂಗ್ರೆಸ್​ ಪಕ್ಷದ ಅಧ್ಯಕ್ಷರಾಗಿದ್ದಾರೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು, ಸಂಸದರು, ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು, ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಾಧ್ಯಕ್ಷರು ಮತ್ತು ಎಐಸಿಸಿಯ ಇತರ ಪದಾಧಿಕಾರಿಗಳು ಹಾಜರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel