ಕುಪ್ವಾರ(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಸಮೀಪ ಸುದ್ಪೊರ ಎಂಬಲ್ಲಿ ಓರ್ವ ವಿದೇಶಿ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.
ಇಂದು ನಸುಕಿನ ಜಾವ ಸ್ಥಳದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನನ್ನು ಹತ್ಯೆಗೈಯಲಾಗಿದ್ದು ಸ್ಥಳದಿಂದ ಮದ್ದುಗುಂಡುಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.