ಸಾಂದರ್ಭಿಕ ಚಿತ್ರ 
ದೇಶ

ಪಾರ್ಕಿಂಗ್ ವಿಚಾರಕ್ಕೆ ಗಲಾಟೆ; ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಲೆ: ವಿಡಿಯೋ ವೈರಲ್

ವಾಹನ ನಿಲುಗಡೆ ಮಾಡುವ ವಿಚಾರವಾಗಿ ಸಂಬಂಧಿಸಿದಂತೆ ಪ್ರಾರಂಭವಾದ ಗಲಾಟೆ ತಾರಕಕ್ಕೇರಿ ಕೊಲೆ ಹಂತಕ್ಕೆ ಹೋಗಿರುವ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ.

ಗಾಜಿಯಾಬಾದ್: ವಾಹನ ನಿಲುಗಡೆ ಮಾಡುವ ವಿಚಾರವಾಗಿ ಸಂಬಂಧಿಸಿದಂತೆ ಪ್ರಾರಂಭವಾದ ಗಲಾಟೆ ತಾರಕಕ್ಕೇರಿ ಕೊಲೆ ಹಂತಕ್ಕೆ ಹೋಗಿರುವ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ.

ಗಾಜಿಯಾಬಾದ್ ಉಪಾಹಾರ ಗೃಹದಲ್ಲಿ ಈ ಘಟನೆ ನಡೆದಿದ್ದು, ಉಪಾಹಾರ ಗೃಹ ಹೊರಗೆ ವಾಹನ ನಿಲುಗಡೆ ಮಾಡುವ ವಿಚಾರವಾಗಿ ನಿನ್ನೆ ರಾತ್ರಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಪಕ್ಕದ ವಾಹನದ ಬಾಗಿಲು ತೆರೆಯಲು ಸಾಧ್ಯವಾಗದ ರೀತಿಯಲ್ಲಿ ಕಾರು ನಿಲ್ಲಿಸಲಾಗಿತ್ತು.

ಇದು ಕಾರು ಚಾಲಕ ವರುಣ್ ಮತ್ತು ಇನ್ನೊಂದು ಕಾರಿನಲ್ಲಿದ್ದವರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಈ ವಾಗ್ವಾದವು ಸ್ವಲ್ಪದರಲ್ಲೇ ಹೊಡೆದಾಟಕ್ಕೆ ತಿರುಗಿ ವರುಣನ ಮೇಲೆ ಅಮಾನುಷವಾಗಿ ಹಲ್ಲೆ ಮಾಡಲಾಗಿದೆ.  ಇಟ್ಟಿಗೆಯಿಂದ ಹೊಡೆಯುವ ವಿಡಿಯೋವನ್ನು ರಸ್ತೆ ಭಾಗದಲ್ಲಿ ಕಾರಿನಲ್ಲಿ ಚಲಿಸುತ್ತಿದ್ದ ವ್ಯಕ್ತಿಯೊಬ್ಬ ರೆಕಾರ್ಡ್ ಮಾಡಿದ್ದಾರೆ. ಈ ವಿಡಿಯೋ ವ್ಯಾಪಕ ವೈರಲ್ ಆಗಿದೆ.
 
ವರುಣ್ ಉಪಾಹಾರ ಗೃಹದ ಹತ್ತಿರ ವಾಸಿಸುತ್ತಿದ್ದರು ಮತ್ತು ಡೈರಿ ವ್ಯಾಪಾರವನ್ನು ನಡೆಸುತ್ತಿದ್ದರು. ಅವರ ತಂದೆ ದೆಹಲಿಯ ನಿವೃತ್ತ ಪೊಲೀಸ್ ಅಧಿಕಾರಿ. ನಿನ್ನೆ ರಾತ್ರಿ ವರುಣ್ ತನ್ನ ಕಾರನ್ನು ಉಪಾಹಾರ ಗೃಹದ ಹೊರಗೆ ನಿಲ್ಲಿಸಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪಕ್ಕದ ವಾಹನದ ಬಾಗಿಲು ತೆರೆಯಲು ಸಾಧ್ಯವಾಗದ ರೀತಿಯಲ್ಲಿ ಕಾರು ನಿಲ್ಲಿಸಲಾಗಿತ್ತು. ಇದು ವರುಣ್ ಮತ್ತು ಇನ್ನೊಂದು ಕಾರಿನಲ್ಲಿದ್ದವರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಈ ವಾಗ್ವಾದವು ಸ್ವಲ್ಪದರಲ್ಲೇ ಹೊಡೆದಾಟಕ್ಕೆ ತಿರುಗಿ ವರುಣ್ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಯಿತು.

ಇದೀಗ ವೈರಲ್ ಆಗಿರುವ ಈ ಅಪರಾಧದ ವಿಡಿಯೋದಲ್ಲಿ ವರುಣನ ತಲೆಯನ್ನು ಇಟ್ಟಿಗೆಯಿಂದ ಹೊಡೆಯುತ್ತಿರುವುದು ಕಂಡುಬರುತ್ತದೆ. ಹಲ್ಲೆಯಿಂದ ಗಾಯಗೊಂಡ ವ್ಯಕ್ತಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.  ಇದೀಗ ಪ್ರಕರಣ ದಾಖಲಾಸಿಕೊಂಡಿರುವ ಗಾಜಿಯಾಬಾದ್ ಪೊಲೀಸರು ತನಿಖೆ ನಡೆಸಿದ್ದಾರೆ. ಆರೋಪಿಗಳಿಗಾಗಿ ಐದು ತಂಡಗಳು ಶೋಧ ನಡೆಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್