ಅಜಂ ಖಾನ್ 
ದೇಶ

ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷ ಭಾಷಣ: ಆಜಂ ಖಾನ್‌ಗೆ 3 ವರ್ಷ ಜೈಲು ಶಿಕ್ಷೆ; ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿ!

ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್‌ಗೆ ರಾಂಪುರ ಕೋರ್ಟ್‌ ದೊಡ್ಡ ಶಾಕ್ ನೀಡಿದ್ದು ಉದ್ರೇಕಕಾರಿ ಭಾಷಣ ಪ್ರಕರಣದಲ್ಲಿ ಎಸ್ಪಿ ನಾಯಕನನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಇದೇ ವೇಳೆ ಅವರಿಗೆ ಮೂರು ವರ್ಷಗಳ ಶಿಕ್ಷೆ ವಿಧಿಸಿದೆ. 

ಲಖನೌ: ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್‌ಗೆ ರಾಂಪುರ ಕೋರ್ಟ್‌ ದೊಡ್ಡ ಶಾಕ್ ನೀಡಿದ್ದು ಉದ್ರೇಕಕಾರಿ ಭಾಷಣ ಪ್ರಕರಣದಲ್ಲಿ ಎಸ್ಪಿ ನಾಯಕನನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಇದೇ ವೇಳೆ ಅವರಿಗೆ ಮೂರು ವರ್ಷಗಳ ಶಿಕ್ಷೆ ವಿಧಿಸಿದೆ. 

ಅಜಂ ಖಾನ್ ಗೆ ಮೂರು ವರ್ಷ ಜೈಲು ಶಿಕ್ಷೆ ಜೊತೆಗೆ 25 ಸಾವಿರ ರೂಪಾಯಿ ದಂಡವನ್ನು ಕೋರ್ಟ್ ವಿಧಿಸಿದೆ.

2019 ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅಜಂ ಖಾನ್ ನಿಂದನೀಯ ಪದಗಳನ್ನು ಬಳಸಿದ್ದರು. ಈ ಪ್ರಕರಣದಲ್ಲಿ ನ್ಯಾಯಾಲಯ ಆತನನ್ನು ದೋಷಿ ಎಂದು ಘೋಷಿಸಿ ಶಿಕ್ಷೆಯನ್ನೂ ನಿಗದಿಪಡಿಸಿದೆ. ಯೋಗಿ ಆದಿತ್ಯನಾಥ್ ಮತ್ತು ಅಂದಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ಆಜಂ ಖಾನ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಅಜಂ ಖಾನ್ ವಿರುದ್ಧ ಪ್ರಕರಣ ದಾಖಲಾಗಿರುವ ಸೆಕ್ಷನ್‌ಗಳಲ್ಲಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿತ್ತು. ಅಜಂ ಖಾನ್ ಈಗ ರಾಜ್ಯ ವಿಧಾನಸಭೆಯ ಸದಸ್ಯತ್ವ ಕಳೆದುಕೊಳ್ಳುವ ಭಯದಲ್ಲಿದ್ದಾರೆ. ಸಮಾಜವಾದಿ ನಾಯಕನ ಮೇಲೆ ಭ್ರಷ್ಟಾಚಾರ ಮತ್ತು ಕಳ್ಳತನ ಸೇರಿದಂತೆ ಸುಮಾರು 90 ಪ್ರಕರಣಗಳಿವೆ. ಈ ವರ್ಷದ ಆರಂಭದಲ್ಲಿ, ವಂಚನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಭೂಕಬಳಿಕೆ ಪ್ರಕರಣದಲ್ಲಿ ಸುಮಾರು ಎರಡು ವರ್ಷಗಳ ಕಾಲ ಜೈಲಿನಲ್ಲಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT