ದೇಶ

ಕೊಯಮತ್ತೂರು ಕಾರು ಸ್ಫೋಟ: ಎನ್ಐಎ ತನಿಖೆಗೆ ಕೇಂದ್ರ ಸರ್ಕಾರದ ಆದೇಶ

Nagaraja AB

ನವದೆಹಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿ ಅಕ್ಟೋಬರ್ 23ರಂದು ಸಂಭವಿಸಿದ ಕಾರು ಸ್ಫೋಟ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಗೆ ಕೇಂದ್ರ ಸರ್ಕಾರ ಗುರುವಾರ ಆದೇಶಿಸಿದೆ.

ಈ ಪ್ರಕರಣದ ಎನ್ ಐಎ ತನಿಖೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶಿಫಾರಸು ಮಾಡಿದ ಒಂದು ದಿನದ ನಂತರ ಗೃಹ ಸಚಿವಾಲಯದ (ಎಂಎಚ್‌ಎ) ಭಯೋತ್ಪಾದನೆ ನಿಗ್ರಹ ಮತ್ತು ಮೂಲಭೂತವಾದ (ಸಿಟಿಸಿಆರ್) ವಿಭಾಗವು ಈ ಆದೇಶವನ್ನು ಹೊರಡಿಸಿದೆ. ಎನ್‌ಐಎ ಶೀಘ್ರದಲ್ಲೇ ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ ಎಂದು ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊಯಮತ್ತೂರಿನ ಉಕ್ಕಡಂ ಪ್ರದೇಶದಲ್ಲಿ ಕಾರಿನಲ್ಲಿ ಸಂಭವಿಸಿದ ಎಲ್ ಪಿಜಿ ಸಿಲಿಂಡರ್ ಸ್ಫೋಟಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವರ್ಗಾಯಿಸುವಂತೆ ಸ್ಟಾಲಿನ್ ಬುಧವಾರ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡಿದ್ದರು ಮತ್ತು ಕೊಯಮತ್ತೂರಿನಲ್ಲಿ ಭದ್ರತೆಯನ್ನು  ಖಚಿತಪಡಿಸಿಕೊಳ್ಳಲು ಪೊಲೀಸರಿಗೆ ಸೂಚಿಸಿದರು.

 ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ಇದುವರೆಗೆ ಆರು ಜನರನ್ನು ಬಂಧಿಸಿದ್ದಾರೆ. ಬಂಧಿತರು ಜಮೀಶಾ ಮುಬಿನ್ ಅವರ ಸಹಚರರು ಎಂದು ತಿಳಿದು ಬಂದಿದೆ. 

SCROLL FOR NEXT