ಸಾಂದರ್ಭಿಕ ಚಿತ್ರ 
ದೇಶ

ತ್ರಿಪುರ: ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಸಚಿವರ ಪುತ್ರ ಭಾಗಿ; ಬಂಧನಕ್ಕೆ ಪ್ರತಿಪಕ್ಷಗಳ ಆಗ್ರಹ

ಚುನಾವಣೆ ನಡೆಯಲಿರುವ ತ್ರಿಪುರಾದಲ್ಲಿ, ರಾಜ್ಯ ಕಾರ್ಮಿಕ ಸಚಿವ ಭಗಬನ್ ದಾಸ್ ಅವರ ಪುತ್ರ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿರೋಧ ಪಕ್ಷಗಳು ಆಡಳಿತಾರೂಢ...

ಗುವಾಹಟಿ: ಚುನಾವಣೆ ನಡೆಯಲಿರುವ ತ್ರಿಪುರಾದಲ್ಲಿ, ರಾಜ್ಯ ಕಾರ್ಮಿಕ ಸಚಿವ ಭಗಬನ್ ದಾಸ್ ಅವರ ಪುತ್ರ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿರೋಧ ಪಕ್ಷಗಳು ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿವೆ.

ಅಕ್ಟೋಬರ್ 20 ರಂದು ಉನಕೋಟಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 16 ವರ್ಷದ ಅಪ್ರಾಪ್ತ ಬಾಲಕಿಯ ಸ್ನೇಹಿತೆ(ಹುಡುಗಿ) ಆಕೆಗೆ ಆಮಿಷ ಒಡ್ಡಿ, ಪಾರ್ಟಿ ನಡೆಯುತ್ತಿದ್ದ ಕುಮಾರ್‌ಘಾಟ್‌ನಲ್ಲಿರುವ ಬಾಡಿಗೆ ಮನೆಗೆ ಕರೆದೊಯ್ದಿದ್ದಾಳೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಂತರ ಆಕೆಯನ್ನು ಕೊಠಡಿಯೊಂದಕ್ಕೆ ಕರೆದೊಯ್ದು ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಆರು ಮಂದಿಯನ್ನು ಬಂಧಿಸಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರದ ಸಚಿವರ ಪುತ್ರನೂ ಇದರಲ್ಲಿ ಭಾಗಿಯಾಗಿದ್ದಾರೆ. ಆದರೆ ಸರ್ಕಾರ ಆರೋಪಿಯನ್ನು ರಕ್ಷಿಸುತ್ತಿದೆ ಎಂದು ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಸಿಪಿಐ-ಎಂ ವಾಗ್ದಾಳಿ ನಡೆಸಿವೆ. ಅಲ್ಲದೆ ಸಚಿವರ ಪುತ್ರನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿವೆ.

ತ್ರಿಪುರಾದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂದು ಸಿಪಿಐ-ಎಂ ಆರೋಪಿಸಿದೆ. "ಕಳೆದ ಕೆಲವು ತಿಂಗಳುಗಳಲ್ಲಿ, ತ್ರಿಪುರಾದಲ್ಲಿ ಮಹಿಳೆಯರ ಮೇಲಿನ ಅಪರಾಧ ಹೆಚ್ಚಾಗುತ್ತಿದೆ" ಎಂದು ಸಿಪಿಐ-ಎಂ ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಪತ್ರಕರ್ತರಿಗೆ ತಿಳಿಸಿದ್ದಾರೆ.

“ರಾಜ್ಯದ ಸಚಿವರೊಬ್ಬರ ಮಗ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ನಂತರ ಬಾಡಿಗೆ ವಸತಿಗೃಹದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಆತನನ್ನು ಬಂಧಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿದ್ದರೂ ಪೊಲೀಸರು ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಆರೋಪಿಯನ್ನು ಬಂಧಿಸುವಂತೆ ಪೊಲೀಸರಿಗೆ ಮನವಿ ಮಾಡುತ್ತೇನೆ ಎಂದು ಚೌಧರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT