ಚಿರಾಗ್ ಪಾಸ್ವಾನ್ 
ದೇಶ

ಬಿಹಾರ ಉಪ ಚುನಾವಣೆಯಲ್ಲಿ ಬಿಜೆಪಿ ಪರ ಚಿರಾಗ್ ಪಾಸ್ವಾನ್ ಪ್ರಚಾರ

ಚಿರಾಗ್ ಪಾಸ್ವಾನ್ 'ಎನ್‌ಡಿಎ ಮಿತ್ರ' ಎಂದು ಪ್ರತಿಪಾದಿಸಿದ ಬಿಹಾರ ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್, ಅವರು ನವೆಂಬರ್ 3 ರಂದು ನಡೆಯುವ ರಾಜ್ಯದ ಮೊಕಾಮಾ ಮತ್ತು ಗೋಪಾಲ್‌ಗಂಜ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ...

ಪಾಟ್ನಾ: ಚಿರಾಗ್ ಪಾಸ್ವಾನ್ 'ಎನ್‌ಡಿಎ ಮಿತ್ರ' ಎಂದು ಪ್ರತಿಪಾದಿಸಿದ ಬಿಹಾರ ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್, ಅವರು ನವೆಂಬರ್ 3 ರಂದು ನಡೆಯುವ ರಾಜ್ಯದ ಮೊಕಾಮಾ ಮತ್ತು ಗೋಪಾಲ್‌ಗಂಜ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೇಸರಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ಶುಕ್ರವಾರ ಹೇಳಿದ್ದಾರೆ.

ಪಾಟ್ನಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೈಸ್ವಾಲ್, ಜಮುಯಿ ಲೋಕಸಭಾ ಸದಸ್ಯರಾಗಿರುವ ಪಾಸ್ವಾನ್ ಅವರು ಮುಂದಿನ ವಾರ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು.

"ನಮ್ಮೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ ಮತ್ತು ರಾಷ್ಟ್ರಪತಿ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲಾ ಪಕ್ಷಗಳನ್ನು ನಾವು ಎನ್‌ಡಿಎ ಮಿತ್ರ ಪಕ್ಷಗಳು ಎಂದು ಪರಿಗಣಿಸುತ್ತೇವೆ. ಚಿರಾಗ್ ಪಾಸ್ವಾನ್ ಅವರು ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ" ಎಂದು ಜೈಸ್ವಾಲ್ ಹೇಳಿದ್ದಾರೆ.

ದಲಿತ ಹೋರಾಟಗಾರ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ, ಚಿರಾಗ್ ಪಾಸ್ವಾನ್ ಅವರು ಕಳೆದ ವರ್ಷ  ತಮ್ಮ ಚಿಕ್ಕಪ್ಪ ಪಶುಪತಿ ಕುಮಾರ್ ಪಾರಸ್ ಅವರ ಬಂಡಾಯದ ನಂತರ ತಮ್ಮ ತಂದೆ ಸ್ಥಾಪಿಸಿದ ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!