ಗಾಂಧಿನಗರ: ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ ಅವರ ಪುತ್ರ ಮಹೇಂದ್ರ ಸಿಂಗ್ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಶಂಕರ್ ಸಿಂಗ್ ವಘೇಲಾ ಅವರು ಕಳೆದ ಆಗಸ್ಟ್‌ನಲ್ಲಿ ಪ್ರಜಾ ಶಕ್ತಿ ಡೆಮಾಕ್ರಟಿಕ್ ಪಾರ್ಟಿ ಎಂಬ ಹೊಸ ಪಕ್ಷವನ್ನು ಸ್ಥಾಪಿಸಿದ್ದು, ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
ಇದನ್ನು ಓದಿ: ಗುಜರಾತ್ ಚುನಾವಣೆ ಹಿನ್ನೆಲೆ ಖರ್ಗೆ ನೇತೃತ್ವದಲ್ಲಿ ಚುನಾವಣೆ ಸಮಿತಿ ಸಭೆ; ಅಭ್ಯರ್ಥಿಗಳ ಪಟ್ಟಿ ಅಂತಿಮದ ಬಗ್ಗೆ ಚರ್ಚೆ
ಈ ಹಿಂದೆ ಗುಜರಾತ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ವಘೇಲಾ ಅವರು ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ ನಂತರ ಏಳು ಶಾಸಕರೊಂದಿಗೆ ಅವರನ್ನು ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು.