ದೇಶ

ಉತ್ತರ ಪ್ರದೇಶದಲ್ಲಿ ಧಾರ್ಮಿಕ ಮತಾಂತರ ಆರೋಪ; ಒಂಬತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲು

Lingaraj Badiger

ಮೀರತ್: ಧಾರ್ಮಿಕ ಮತಾಂತರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಒಂಬತ್ತು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದಂತೆ ದೂರು ಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಬ್ರಹ್ಮಪುರಿ ಪೊಲೀಸ್ ಠಾಣೆಗೆ ತಿಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧೀಕ್ಷಕ(ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಹೇಳಿದ್ದಾರೆ.

ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಶುಕ್ರವಾರ ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂಬಂಧ ಮಂಗಟಪುರಂ ಕಾಲೋನಿಯ ಕೆಲವು ನಿವಾಸಿಗಳು ದೂರು ನೀಡಿದ್ದರು.

ದೂರುದಾರರ ಪ್ರಕಾರ, ಕೋವಿಡ್-19 ಸಮಯದಲ್ಲಿ, ಕೆಲವು ಜನ ಈ ಪ್ರದೇಶದಲ್ಲಿ ವಾಸಿಸುವ ಬಡವರಿಗೆ ಆಹಾರ ಮತ್ತು ಹಣಕಾಸಿನ ನೆರವು ನೀಡಿದ್ದರು. ಬಳಿಕ ಅವರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸುವಂತೆ ಒತ್ತಾಯಿಸಿದರು ಎಂದು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

SCROLL FOR NEXT