ದೇಶ

ಗುಜರಾತ್ ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಸಮಿತಿ ರಚನೆ

Lingaraj Badiger

ಅಹಮದಾಬಾದ್: ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ, ಗುಜರಾತ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿ ಸಂಬಂಧ ಸಮಿತಿ ರಚಿಸಲು ಬಿಜೆಪಿ ಸರ್ಕಾರ ಶನಿವಾರ ನಿರ್ಧರಿಸಿದೆ.
          
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿ ಸಂಬಂಧ ಸಮಿತಿ ರಚಿಸುವ ಪ್ರಸ್ತಾವನೆಗೆ ರಾಜ್ಯ ಸಂಪುಟ ಒಪ್ಪಿಗೆ ನೀಡಿದೆ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಾಂಘ್ವಿ ಅವರು ತಿಳಿಸಿದ್ದಾರೆ. 
        
ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಮುಂದಿನ ವಾರ ಪ್ರಕಟವಾಗುವ ನಿರೀಕ್ಷೆಯಿರುವುದರಿಂದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ನೇತೃತ್ವದ ಇಂದಿನ ಸಂಪುಟ ಸಭೆ ಕೊನೆಯ ಸಂಪುಟ ಸಭೆ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ: ಗುಜರಾತ್ ವಿಧಾನಸಭೆ ಚುನಾವಣೆ: ಎಎಪಿ ಸಿಎಂ ಅಭ್ಯರ್ಥಿಯನ್ನು ನೀವೇ ಆರಿಸಿ, ಜನಾಭಿಪ್ರಾಯದ ಮೊರೆಹೋದ ಕೇಜ್ರಿವಾಲ್!
        
ಈ ಸಮಿತಿಯು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿರುತ್ತದೆ ಮತ್ತು ಮೂರರಿಂದ ನಾಲ್ಕು ಸದಸ್ಯರನ್ನು ಹೊಂದಿರುತ್ತದೆ ಎಂದು ಕೇಂದ್ರ ಸಚಿವ ಪರಶೋತ್ತಮ್ ರೂಪಾಲಾ ಹೇಳಿದ್ದಾರೆ.
        
ಈ ಹಿಂದೆ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಬಿಜೆಪಿ ಸರ್ಕಾರಗಳು ತಮ್ಮ ರಾಜ್ಯಗಳಲ್ಲಿ ಯುಸಿಸಿಯನ್ನು ಜಾರಿಗೆ ತರುವುದಾಗಿ ಘೋಷಿಸಿದ್ದವು.

SCROLL FOR NEXT